ADVERTISEMENT

ಸಚಿವ ಸ್ಥಾನ ನೀಡಲು ಮನವಿ: ಸಂಸದ ಎ.ನಾರಾಯಣಸ್ವಾಮಿ ಪರಿಗಣಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 30 ಜೂನ್ 2021, 12:17 IST
Last Updated 30 ಜೂನ್ 2021, 12:17 IST
ಎ. ನಾರಾಯಣಸ್ವಾಮಿ.
ಎ. ನಾರಾಯಣಸ್ವಾಮಿ.   

ಚಿತ್ರದುರ್ಗ: ಕೇಂದ್ರ ಸಚಿವ ಸಂಪುಟದ ಪುನರ್‌ ರಚನೆಯ ಸಂದರ್ಭದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸದಸ್ಯ ಎ.ನಾರಾಯಣಸ್ವಾಮಿ ಅವರಿಗೆ ಅವಕಾಶ ನೀಡಬೇಕು ಎಂದು ಮಾದಿಗ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಜಿಲ್ಲಾಡಳಿತ ಹಾಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಮೂಲಕ ಮನವಿ ಪತ್ರವನ್ನು ಬುಧವಾರ ರವಾನಿಸಿದ್ದಾರೆ.

ಎ.ನಾರಾಯಣಸ್ವಾಮಿ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಮಾಜ ಕಲ್ಯಾಣ ಸಚಿವರಾಗಿಯೂ ಉತ್ತಮ ಸೇವೆ ಸಲ್ಲಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ 6.26 ಲಕ್ಷ ಮತಗಳನ್ನು ಪಡೆದು 85 ಸಾವಿರ ಮತಗಳ ಅಂತರದಿಂದ ವಿಜೇತರಾಗಿದ್ದಾರೆ. ಇವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಪರಿಗಣಿಸುವುದು ಸೂಕ್ತ ಎಂದು ಮನವಿ ಮಾಡಿದ್ದಾರೆ.

ADVERTISEMENT

ಪರಿಶಿಷ್ಟ ಜಾತಿಯ ಎಡಗೈ ಪಂಗಡಕ್ಕೆ ಸೇರಿದ ನಾರಾಯಣಸ್ವಾಮಿ ಅವರು ಮಾದಿಗ ಸಮುದಾಯದ ಪ್ರಭಾವಿ ನಾಯಕ. ಸಮುದಾಯದ ಜನಪ್ರತಿನಿಧಿಗೆ ಸಚಿವ ಸ್ಥಾನ ನೀಡುವುದು ಇನ್ನಷ್ಟು ಹುಮ್ಮಸ್ಸು ತುಂಬುತ್ತದೆ. ಭವಿಷ್ಯದಲ್ಲಿ ಬಿಜೆಪಿಗೂ ಅನುಕೂಲವಾಗುತ್ತದೆ. ನಾರಾಯಣಸ್ವಾಮಿ ಅವರ ಹೆಸರನ್ನು ಶಿಫಾರಸು ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಲ್ಲಿ ಕೋರಿಕೆ ಸಲ್ಲಿಸಿದ್ದಾರೆ.

ಮುಖಂಡರಾದ ಡಿ.ಓ.ಮುರಾರ್ಜಿ, ಡಿ.ಆರ್. ಪಾಂಡುರಂಗಸ್ವಾಮಿ, ಟಿ.ದೇವರಾಜ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹನುಮಂತಪ್ಪ, ಪಾವಗಡ ಶಿವಕುಮಾರ್ ಸಾಕೇಲ್, ಶಿರಾ ರವಿಕುಮಾರ್, ಕಣಿವೆ ಮಾರಮ್ಮ ಸಂಘದ ಅಧ್ಯಕ್ಷ ಎಂ.ತಿಪ್ಪೇಸ್ವಾಮಿ, ನಾಯಕನಹಟ್ಟಿ ಶಿವದತ್ತ, ಕರಿಕೆರೆ ತಿಪ್ಪೇಸ್ವಾಮಿ, ಹೊಟ್ಟೆಪ್ಪನಹಳ್ಳಿ ಮಾರುತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.