ಚಿತ್ರದುರ್ಗ: ತಾಲ್ಲೂಕಿನ ಮಲ್ಲಾಪುರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಶಾಲಾ ಶಿಕ್ಷಣ ಇಲಾಖೆಯಿಂದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ನಡೆಯಿತು.
ಈ ಮೂಲಕ ಸಮುದಾಯದಲ್ಲಿ ಜಾಗೃತಿ ಮೂಡಿಸಿ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವ ಪ್ರಯತ್ನ ಮಾಡಲಾಯಿತು.
‘ಸರ್ಕಾರಿ ಶಾಲೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕಲಿಕಾ ಗುಣಮಟ್ಟ ಉತ್ತಮಪಡಿಸಲು ಸರ್ಕಾರ ಅನೇಕ ಯೋಜನೆ ಕೈಗೊಂಡಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ತಿಳಿಸಿದರು.
‘ಪಾಲಕರು ತಮ್ಮ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಸರ್ಕಾರಿ ಶಾಲೆಗಳತ್ತ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಬೇಕು’ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್ ಕುಮಾರ್ ಹೇಳಿದರು.
ಬಿಸಿಯೂಟದ ಸಹಾಯಕ ನಿರ್ದೇಶಕ ಗುರುರಾಜ್, ಹಿರಿಯ ಉಪನ್ಯಾಸಕ ಅಶ್ವಥ್ ನಾರಾಯಣ್, ಮುಖ್ಯಶಿಕ್ಷಕಿ ರತ್ನಮ್ಮ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.