ADVERTISEMENT

ಮುನ್ನೆಚ್ಚರಿಕೆಯಿಂದ ಡೆಂಗಿ ತಡೆ ಸಾಧ್ಯ: ಮಧುಕುಮಾರ್‌

​ಪ್ರಜಾವಾಣಿ ವಾರ್ತೆ
Published 16 ಮೇ 2025, 15:53 IST
Last Updated 16 ಮೇ 2025, 15:53 IST
ಮೊಳಕಾಲ್ಮುರಿನಲ್ಲಿ ಶುಕ್ರವಾರ ಡೆಂಗಿ ಜಾಗೃತಿ ಜಾಥಾ ನಡೆಯಿತು
ಮೊಳಕಾಲ್ಮುರಿನಲ್ಲಿ ಶುಕ್ರವಾರ ಡೆಂಗಿ ಜಾಗೃತಿ ಜಾಥಾ ನಡೆಯಿತು   

ಮೊಳಕಾಲ್ಮುರು: ಆರೋಗ್ಯ ಇಲಾಖೆ ಸೂಚಿಸುವ ಮಾರ್ಗದರ್ಶಿಗಳನ್ನು ಪಾಲಿಸುವ ಮೂಲಕ ಡೆಂಗಿ ನಿರ್ಮೂಲನೆ ಮಾಡಲು ಸಾಧ್ಯ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಮಧುಕುಮಾರ್‌ ಹೇಳಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ, ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಮತ್ತು ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡೆಂಗಿ ದಿನಾಚರಣೆಯಲ್ಲಿ ಮಾತನಾಡಿದರು.

ಮನೆಯ ಸುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸೊಳ್ಳೆಗಳ ನಾಶಕ್ಕೆ ಇತರೆ ಕಾರ್ಯಗಳನ್ನು ಕೈಗೊಳ್ಳಬೇಕು. ಇದಕ್ಕೆ ಸ್ಥಳೀಯ ಸಂಸ್ಥೆಗಳು ಮತ್ತು ಆರೋಗ್ಯ ಇಲಾಖೆ ಹಾಕಿಕೊಳ್ಳುವ ಕಾರ್ಯಗಳಿಗೆ ಸಮುದಾಯ ಕೈ ಜೋಡಿಸಿದಲ್ಲಿ ಅನುಕೂಲವಾಗಲಿದೆ. ರೋಗ ಲಕ್ಷಣಗಳು ಕಂಡುಬಂದಲ್ಲಿ ಆರಂಭದಲ್ಲಿಯೇ ಚಿಕಿತ್ಸೆ ಪಡೆದಲ್ಲಿ ಯಾವುದೇ ತೊಂದರೆ ಇಲ್ಲ ಎಂದರು.

ADVERTISEMENT

ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಲಾಯಿತು. ಆಡಳಿತ ವೈದ್ಯಾಧಿಕಾರಿ  ಮಂಜುನಾಥ್‌, ತಾಲ್ಲೂಕು ಆರೋಗ್ಯಾಧಿಕಾರಿ ಜಿ.ಟಿ. ಕುಮಾರ್‌, ಹಿರಿಯ ಆರೋಗ್ಯ ನಿರೀಕ್ಷಕಿ ಮಾರುತಮ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.