ಹೊಸದುರ್ಗ: ತಾಲ್ಲೂಕಿನ ಸಾಣೇಹಳ್ಳಿಯಲ್ಲಿ ನ. 2ರಿಂದ 7ರವರೆಗೆ 6 ದಿನಗಳ ಕಾಲ ರಾಷ್ಟ್ರೀಯ ನಾಟಕೋತ್ಸವ ನಡೆಯಲಿದೆ. ಶಿವಕುಮಾರ ಬಯಲು ರಂಗಮಂದಿರದಲ್ಲಿ ಮುಖ್ಯ ವೇದಿಕೆ ಕಾರ್ಯಕ್ರಮ ಮತ್ತು ನಾಟಕಗಳ ಪ್ರದರ್ಶನ ನಡೆಯಲಿದೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸಾಣೇಹಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ನಾಟಕೋತ್ಸವದ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
‘ಶಿವಕುಮಾರ ರಂಗಮಂದಿರದಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನಾ ಕಾರ್ಯಕ್ರಮಗಳು ನಡೆಯಲಿವೆ. ನಾಟಕೋತ್ಸವದಲ್ಲಿ ಶಿವಸಂಚಾರದ 3 ನಾಟಕಗಳು ಮತ್ತು ಬೇರೆ ಭಾಗಗಳ ನಾಟಕಗಳು ಪ್ರದರ್ಶನಗೊಳ್ಳಲಿವೆ. ಪ್ರತಿದಿನದ ವಿಚಾರ ಮಾಲಿಕೆ, ವಚನ ಸಂಗೀತ, ನೃತ್ಯರೂಪಕ, ಸಾಧಕರಿಗೆ ಅಭಿನಂದನೆ, ರಾಜಕೀಯ ನೇತಾರರ, ಚಿಂತಕರ ಮಾತುಗಳು, ಸ್ವಾಮಿಜಿಗಳ ಆಶೀರ್ವಚನ, ಶಿವಕುಮಾರ ಪ್ರಶಸ್ತಿ ಪ್ರಧಾನ ಮುಂತಾದ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಶಿವಮೊಗ್ಗದ ವರ್ತಕ ಎಚ್. ಓಂಕಾರಪ್ಪ, ಎಸ್. ಸಿದ್ದಪ್ಪ, ಅಜ್ಜಂಪುರದ ಎ.ಸಿ. ಚಂದ್ರಣ್ಣ, ಕೆ.ಸಿ. ಶಿವಮೂರ್ತಿ, ಹೆಬ್ಬಳ್ಳಿ ಮಲ್ಲಿಕಾರ್ಜುನ, ಅಜ್ಜಪ್ಪ, ಎಸ್.ಕೆ. ಪರಮೇಶ್ವರಯ್ಯ, ವೀರಶೈವ ನೌಕರರ ಸಂಘದ ಅಧ್ಯಕ್ಷ ಶಶಿಧರ, ಲೋಕೇಶ್, ಬಿ.ಪಿ. ಓಂಕಾರಪ್ಪ, ಕೊಮಾರನಹಳ್ಳಿ ರವಿಕುಮಾರ್, ಸಿದ್ದಯ್ಯ, ದೃವಕುಮಾರ್, ಕೆ.ಆರ್. ಆನಂದಪ್ಪ, ಅಜ್ಜಂಪುರ ಪಟ್ಟಣ ಪಂಚಾಯಿತಿ ಸದಸ್ಯ ಮಧು, ಅಣ್ಣಪ್ಪ, ಶಿವಮೂರ್ತಯ್ಯ, ಸಾಣೇಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಸ್ಥರು, ಕಲಾ ಸಂಘದ ಪದಾಧಿಕಾರಿಗಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.