ನಾಯಕನಹಟ್ಟಿ: ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಸಮೀಪದ ಜಾಗನೂರಹಟ್ಟಿ ರಸ್ತೆಯಲ್ಲಿ ಭಾನುವಾರ ನಡದಿದೆ. 17 ಜನರು ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ತಿಮ್ಮಪ್ಪಯ್ಯನಹಳ್ಳಿ ಗ್ರಾಮದಿಂದ ಮಲ್ಲೂರಹಟ್ಟಿ ಗ್ರಾಮಕ್ಕೆ ಮದುವೆ ದಿಬ್ಬಣಕ್ಕೆ ಟ್ರ್ಯಾಕ್ಟರ್ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಬೆಳಿಗ್ಗೆ 10ಗಂಟೆಗೆ ತಿಮ್ಮಪ್ಪಯ್ಯನಹಳ್ಳಿಯಿಂದ ಮಲ್ಲೂರಹಟ್ಟಿಗೆ 30ಕ್ಕೂ ಹೆಚ್ಚು ಜನರು ತೆರಳಿದ್ದರು. ಮದುವೆ ಮುಗಿಸಿಕೊಂಡು ತಿಮ್ಮಪ್ಪಯ್ಯನಹಳ್ಳಿಗೆ ವಾಪಸಾಗುವಾಗ ಜಾಗನೂರಹಟ್ಟಿ ಸಮೀಪ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದಿತು.
ರಭಸಕ್ಕೆ ಟ್ರಾಲಿಯಲ್ಲಿದ್ದ ಇಬ್ಬರಿಗೆ ತಲೆ ಮತ್ತು ಕೈಗೆ ತೀವ್ರ ಪೆಟ್ಟುಬಿದ್ದಿದ್ದು, 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಚಳ್ಳಕೆರೆ ಮತ್ತು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ನಾಯಕನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.