ಬಂಧನ
(ಪ್ರಾತಿನಿಧಿಕ ಚಿತ್ರ)
ನಾಯಕನಹಟ್ಟಿ: ಹೋಬಳಿಯ ನೆಲಗೇತನಹಟ್ಟಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಶುಕ್ರವಾರ ಗಾಂಜಾ ಮಾರಾಟ ಮಾಡುತ್ತಿದ್ದ ಗ್ರಾಮದ ಪಿ.ಬಿ. ಚನ್ನಕೇಶಮೂರ್ತಿ ಎಂಬ ಯುವಕನನ್ನು ಬಂಧಿಸಿ ಪೊಲೀಸರು 35ಗ್ರಾಂ ಒಣ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಾಹಿತಿ ಆಧರಿಸಿ ಪಿಎಸ್‌ಐ ಜಿ.ಪಾಂಡುರಂಗ ಮತ್ತು ಸಿಬ್ಬಂದಿ ದಾಳಿ ನಡೆಸಿದಾಗ ಪ್ಲಾಸ್ಟಿಕ್ ಕವರಿನಲ್ಲಿ ಮಾರಾಟಕ್ಕೆಂದು ತಂದಿದ್ದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.