ADVERTISEMENT

ಐತಿಹಾಸಿಕ ಗುರುತಿಪ್ಪೇರುದ್ರಸ್ವಾಮಿ ಹುಂಡಿ ಎಣಿಕೆ; ₹ 34 ಲಕ್ಷ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 22:44 IST
Last Updated 21 ಫೆಬ್ರುವರಿ 2026, 22:44 IST
ನಾಯಕನಹಟ್ಟಿ ಪಟ್ಟಣದ ಐತಿಹಾಸಿಕ ಗುರುತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಶನಿವಾರ ಕಂದಾಯ ಮತ್ತು ಬ್ಯಾಂಕ್ ಸಿಬ್ಬಂದಿ ದೇವರ ಹುಂಡಿ ಹಣವನ್ನು ಎಣಿಕೆ ಮಾಡಿ ಸಂಗ್ರಹಿಸಿರುವುದು
ನಾಯಕನಹಟ್ಟಿ ಪಟ್ಟಣದ ಐತಿಹಾಸಿಕ ಗುರುತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಶನಿವಾರ ಕಂದಾಯ ಮತ್ತು ಬ್ಯಾಂಕ್ ಸಿಬ್ಬಂದಿ ದೇವರ ಹುಂಡಿ ಹಣವನ್ನು ಎಣಿಕೆ ಮಾಡಿ ಸಂಗ್ರಹಿಸಿರುವುದು   

ನಾಯಕನಹಟ್ಟಿ: ಐತಿಹಾಸಿಕ ಗುರುತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ನಾಲ್ಕು ತಿಂಗಳ ನಂತರ ಹುಂಡಿ ಹಣದ ಎಣಿಕೆ ಕಾರ್ಯವನ್ನು ಶನಿವಾರ ದೇವಾಲಯದ ಆವರಣದಲ್ಲಿ ಬ್ಯಾಂಕ್ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳ ಸಹಯೋಗದಲ್ಲಿ ನಡೆಸಲಾಯಿತು.

ಮೊದಲು ಹೊರಮಠ ದೇವಾಲಯದಲ್ಲಿ ಮುಜರಾಯಿ ಹಾಗೂ ಕಂದಾಯ ಇಲಾಖೆಯ ತಹಶೀಲ್ದಾರ್ ಹಾಗೂ ದೇವಾಲಯ ಕಾರ್ಯನಿರ್ವಹಕ ಅಧಿಕಾರಿಯವರ ನೇತೃತ್ವದಲ್ಲಿ ಬೆಳಗ್ಗೆ 9ಗಂಟೆಗೆ ಆರಂಭವಾದ ಎಣಿಕೆ ಕಾರ್ಯ 12 ಗಂಟೆಗೆ ಮುಕ್ತಾಯವಾಯಿತು. ನಂತರ ಒಳಮಠದಲ್ಲಿ ಆರಂಭವಾದ ಎಣಿಕೆ ಕಾರ್ಯ ಮಧ್ಯಾಹ್ನ 3.30ಕ್ಕೆ ಮುಕ್ತಾಯವಾಯಿತು.

ಹೊರಮಠದಲ್ಲಿ ₹ 8.38 ಲಕ್ಷ ಹಾಗೂ ಒಳಮಠದಲ್ಲಿ ₹ 25.91 ಲಕ್ಷ  ಒಟ್ಟು ₹ 34.30 ಹಣ ಸಂಗ್ರಹವಾಗಿದೆ. ಮಾರ್ಚ್ 6ರಂದು ವಾರ್ಷಿಕ ಮಹಾಜಾತ್ರೆ ನಡೆಯಲಿದ್ದು, ಪೂರ್ವಭಾವಿಯಾಗಿ ಹುಂಡಿಯನ್ನು ತೆರೆಯಲಾಗಿದೆ. ಶನಿವಾರ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ದೇವಾಲಯದ ಕೆನರಾಬ್ಯಾಂಕ್ ಖಾತೆಗೆ ಹಾಕಲಾಯಿತು.

ADVERTISEMENT

ಕಾರ್ಯನಿರ್ವಹಕಾಧಿಕಾರಿ ಎಚ್. ಗಂಗಾಧರಪ್ಪ, ಶಿರಸ್ಥೆದಾರ್ ಸದಾಶಿವಪ್ಪ, ಕಂದಾಯ ನಿರೀಕ್ಷಕ ಚೇತನ್‌ ಕುಮಾರ್, ಕೆನರಾಬ್ಯಾಂಕ್ ವ್ಯವಸ್ಥಾಪಕ ರತನ್‌ ಕುಮಾರ್ ದಯಾ, ವಿಜಯಭಾಸ್ಕರ್, ವಿವೇಕ್, ಮನೋಹರ್, ಎಂ.ಬಿ. ಮಹಾಸ್ವಾಮಿ, ವೀರಭದ್ರಪ್ಪ, ಪ್ರಸನ್ನಕುಮಾರ್ ಸೇರಿದಂತೆ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು, ಮುಜುರಾಯಿ ಇಲಾಖೆಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.