ADVERTISEMENT

ಕಾಮಗಾರಿ ಚುರುಕುಗೊಳಿಸಿ: ಸಿಎಂಗೆ ಸಿರಿಗೆರೆಶ್ರೀ ಸಲಹೆ

ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2022, 6:13 IST
Last Updated 30 ನವೆಂಬರ್ 2022, 6:13 IST
ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ತರಳಬಾಳು ಕೇಂದ್ರದಲ್ಲಿ ಸಿರಿಗೆರೆ ಶ್ರೀ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿದರು.
ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ತರಳಬಾಳು ಕೇಂದ್ರದಲ್ಲಿ ಸಿರಿಗೆರೆ ಶ್ರೀ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿದರು.   

ಸಿರಿಗೆರೆ : ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ನೂರಾರು ಕೆರೆಗಳಿಗೆ ನೀರು ತುಂಬಿಸುವ ಬಹು ನಿರೀಕ್ಷಿತ ಸಾಸ್ಟೆಹಳ್ಳಿ ಏತ ನೀರಾವರಿ ಕಾಮಗಾರಿಯನ್ನು 2023ರ ಫೆಬ್ರುವರಿ ಒಳಗಾಗಿ ಪೂರೈಸಿ ಕಾರ್ಯಗತಗೊಳಿಸುವಂತೆ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ತರಳಬಾಳು ಸಾಂಸ್ಕೃತಿಕ ಕೇಂದ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿದರು.

ಯೋಜನೆ ಸಾಕಾರಗೊಂಡರೆ ಮೂರೂ ಜಿಲ್ಲೆಗಳ ಕೆರೆಗಳು ತುಂಬಿ ತುಳಕಲಿವೆ. ಆದರೆ, ಯೋಜನೆ ಕಾಮಗಾರಿ ಕುಂಟುತ್ತಾ ಸಾಗಿದೆ. ಕಾಮಗಾರಿಯನ್ನು ಚುರುಕುಗೊಳಿಸಿ ಫೆಬ್ರುವರಿಯೊಳಗೆ ಕಾಮಗಾರಿ ಮುಗಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸುವಂತೆ ಸ್ವಾಮೀಜಿ ತಿಳಿಸಿದರು.

ಜನವರಿ, ಫೆಬ್ರುವರಿ ತಿಂಗಳಲ್ಲಿ ಕೊಟ್ಟೂರಿನಲ್ಲಿ ‘ತರಳಬಾಳು ಹುಣ್ಣಿಮೆ ಮಹೋತ್ಸವ’ ನಡೆಯಲಿದೆ. ಯೋಜನೆ ಕಾರ್ಯಗತಗೊಂಡರೆ ಬರದ ನಾಡು ಎಂಬ ಹಣೆಪಟ್ಟಿ ಹೊತ್ತಿರುವ ಕೊಟ್ಟೂರು ಕೃಷಿಕರು ನೆಮ್ಮದಿಯ ಬದುಕು ಸಾಗಿಸಲು ಸಹಾಯವಾಗುತ್ತದೆ ಎಂದು ಹೇಳಿದರು.

ADVERTISEMENT

ತರಳಬಾಳು ಕೇಂದ್ರಕ್ಕೆ ಬಂದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಫಲಪುಷ್ಪ ನೀಡಿ, ಶಾಲುಹೊದಿಸಿ ಗೌರವ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.