ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
ಸಿರಿಗೆರೆ (ಚಿತ್ರದುರ್ಗ ಜಿಲ್ಲೆ): ಮುಂದಿನ ವರ್ಷ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಭದ್ರಾವತಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಭರಮಸಾಗರದಲ್ಲಿ 9 ದಿನಗಳ ಕಾಲ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವದ ಕೊನೆಯ ದಿನವಾದ ಬುಧವಾರ ರಾತ್ರಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ತರಳಬಾಳು ಹುಣ್ಣಿಮೆ ಆಚರಿಸಲು ಈ ಬಾರಿ ದುಬೈನಿಂದಲೂ ಬೇಡಿಕೆ ಬಂದಿದೆ. ವಿಜಯಪುರ, ರಾಣೆಬೆನ್ನೂರು ಮತ್ತಿತರ ಕಡೆಯಿಂದಲೂ ಕೋರಿಕೆಗಳು ಬಂದಿವೆ. ಆದರೆ, ಭದ್ರಾವತಿಯಲ್ಲಿ ಹುಣ್ಣಿಮೆ ಮಹೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.
ಭದ್ರಾವತಿಯಲ್ಲಿ 1987ರಲ್ಲಿ ತರಳಬಾಳು ಹುಣ್ಣಿಮೆ ನಡೆದಿತ್ತು. ಇದೀಗ ಎರಡನೇ ಬಾರಿಗೆ ಭದ್ರಾವತಿಯಲ್ಲಿ ಆಚರಣೆ ನಡೆಯಲಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.