ADVERTISEMENT

ಹೊಳಲ್ಕೆರೆ: ಎನ್‌ಪಿಎಸ್ ರದ್ದುಗೊಳಿಸಲು ಪ್ರಧಾನಿಗೆ ಪತ್ರ

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 4:05 IST
Last Updated 25 ಜುಲೈ 2025, 4:05 IST
ಹೊಳಲ್ಕೆರೆಯಲ್ಲಿ ನಿವೃತ್ತ ನೌಕರರು ಗುರುವಾರ ಹೊಸಪಿಂಚಣಿ ಯೋಜನೆ ರದ್ದುಗೊಳಸುವಂತೆ ಆಗ್ರಹಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಕಳುಹಿಸಿದರು.
ಹೊಳಲ್ಕೆರೆಯಲ್ಲಿ ನಿವೃತ್ತ ನೌಕರರು ಗುರುವಾರ ಹೊಸಪಿಂಚಣಿ ಯೋಜನೆ ರದ್ದುಗೊಳಸುವಂತೆ ಆಗ್ರಹಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಕಳುಹಿಸಿದರು.   

ಹೊಳಲ್ಕೆರೆ: ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ನಿವೃತ್ತ ನೌಕರರು ತಹಶೀಲ್ದಾರ್ ಬೀಬಿ ಫಾತಿಮಾ ಅವರ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಕಳುಹಿಸಿದರು.

ಹೊಸ ಪಿಂಚಣಿ ಯೋಜನೆಯಿಂದ ಸರ್ಕಾರಿ ನೌಕರರು ಸಂಕಷ್ಟ ಅನುಭವಿಸುವಂತಾಗಿದೆ. ಜನಸೇವೆಗೆ ಜೀವನ ಪೂರ್ತಿ ದುಡಿದ ನೌಕರರು ಕೊನೆಗಾಲದಲ್ಲಿ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹಳೆಯ ಪಿಂಚಣಿ ಯೋಜನೆಯನ್ನೇ ಮುಂದುವರಿಸಬೇಕು ಎಂದು ನಿವೃತ್ತ ನೌಕರರು ಆಗ್ರಹಿಸಿದ್ದಾರೆ.

‘ಕೇಂದ್ರ ಸರ್ಕಾರ 8ನೇ ವೇತನ ಆಯೋಗ ರಚಿಸಿದ್ದು, 2026ರ ಒಳಗೆ ನಿವೃತ್ತರಾದ ನೌಕರರಿಗೆ ಪಿಂಚಣಿ ಹಾಗೂ ಕುಟುಂಬ ಪಿಂಚಣಿ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿದ್ದಾರೆ. ಇದರಿಂದ ನಿವೃತ್ತ ನೌಕರರಿಗೆ ಜೀವನ ಭದ್ರತೆಯೇ ಇಲ್ಲದಂತಾಗಿದೆ. ಎಲ್ಲ ನೌಕರರ ವೇತನ ಪರಿಷ್ಕರಣೆ ಮಾಡುವಂತೆ ನಿವೃತ್ತ ನೌಕರರ ಪಿಂಚಣಿಯನ್ನೂ ಪರಿಷ್ಕರಿಸಬೇಕು’ ಎಂದು ನೌಕರರು ಒತ್ತಾಯಿಸಿದ್ದಾರೆ.

ADVERTISEMENT

ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಸಿ. ಗಂಗಾಧರಪ್ಪ, ಸಹ ಕಾರ್ಯದರ್ಶಿ ಶಂಕರಪ್ಪ, ಬಿ.ಮಲ್ಲೇಶಪ್ಪ, ರಾಮಚಂದ್ರಪ್ಪ, ನಿವೃತ್ತ ಶಿಕ್ಷಕ ಬಸವರಾಜಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.