
ಮೊಳಕಾಲ್ಮುರು: ಉದ್ಯೋಗಖಾತ್ರಿ ಯೋಜನೆ ಜಾಬ್ ಕಾರ್ಡ್‌ಗೆ ಕಾರ್ಮಿಕರು ಕಡ್ಡಾಯವಾಗಿ ಇಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಪಂಚಾಯಿತಿ ಸಿಇಒ ಡಾ. ಆಕಾಶ್ ಸೂಚಿಸಿದರು.
ಶುಕ್ರವಾರ ತಾಲ್ಲೂಕಿನ ತುಮಕೂರ್ಲಹಳ್ಳಿ ಮತ್ತು ರಾಯಾಪುರ ಗ್ರಾಮಪಂಚಾಯಿತಿಗಳಿಗೆ ಭೇಟಿ ನೀಡಿದ್ದ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮುಂದಿನ ದಿನಗಳಲ್ಲಿ ಯೋಜನೆಯಲ್ಲಿ ಕೆಲ ಬದಲಾವಣೆಗಳು ಆಗಲಿದ್ದು ಇದಕ್ಕೆ ಪೂರಕವಾಗಿ ಕಡ್ಡಾಯ ಇಕೆವೈಸಿ ಮಾಡಿಸಬೇಕು. ಗ್ರಾಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು, ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಸ್ವಚ್ಛ ಸಂಕೀರ್ಣಗಳು ಸದ್ಬಳಕೆ ಮಾಡಿಕೊಳ್ಳಲು ಕ್ರಮ ಕೈಗೊಳ್ಳಬೇಕು. ಕಂದಾಯ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ರಾಯಾಪುರ ಸಮೀಪದ ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಕಲಿಕಾ ಪ್ರಗತಿಯನ್ನು ವೀಕ್ಷಿಸಿದರು, ನಂತರ ಅಡುಗೆ ಕೋಣೆಗೆ ಭೇಟಿ ಕೊಟ್ಟು ಆಹಾರದ ಗುಣಮಟ್ಟ, ಬಳಕೆ ನೀರಿನ ಮಾಹಿತಿ ಪಡೆದರು. ಸ್ವಚ್ಛತೆಯನ್ನು ಕಾಪಾಡುವಂತೆ ಅಡುಗೆ ಸಿಬ್ಬಂದಿಗೆ ಸೂಚಿಸಿದರು. ತದ ನಂತರ ರಾಯಾಪುರದ ಸಾರ್ವಜನಿಕ ಗ್ರಂಥಾಯಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲ್ಲೂಕು ಪಂಚಾಯಿತಿ ಇಒ ಎಂ. ಹನುಮಂತಪ್ಪ, ಪಿಡಿಒ ಕರಿಬಸಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.