ADVERTISEMENT

ಹೊಳಲ್ಕೆರೆ: ಸರಣಿ ಅಪಘಾತದಲ್ಲಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2020, 6:29 IST
Last Updated 4 ನವೆಂಬರ್ 2020, 6:29 IST
ಅಪಘಾತ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದರು.
ಅಪಘಾತ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದರು.    
""

ಹೊಳಲ್ಕೆರೆ (ಚಿತ್ರದುರ್ಗ): ತಾಲ್ಲೂಕಿನ ಹಳೇಹಳ್ಳಿ ಗೇಟ್ ಸಮೀಪ ಬುಧವಾರ ಎರಡು ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತ ವ್ಯಕ್ತಿಯನ್ನು ಶಂಭು (60) ಎಂದು ಗುರುತಿಸಲಾಗಿದೆ. ತರಿಕೆರೆ ತಾಲ್ಲೂಕಿನ ಲಕ್ಕವಳ್ಳಿಯಿಂದ ಹೊಳಲ್ಕೆರೆ ತಾಲ್ಲೂಕಿನ ಕೊಂಡಾಪುರ ಗ್ರಾಮಕ್ಕೆ ಹೆಣ್ಣು ನೋಡಲು ಎರಡು ಕಾರುಗಳಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

ಚಿತ್ರದುರ್ಗ ಕಡೆಯಿಂದ ವೇಗವಾಗಿ ಬಂದ ಲಾರಿ, ಚಾಲಕನ ನಿಯಂತ್ರಣ ಕಳೆದುಕೊಂಡು ಎರಡೂ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ ಎಂದು ಚಿತ್ರಹಳ್ಳಿ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಕಾರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.