ಚಿತ್ರದುರ್ಗ: ಸರಕು ಸಾಗಣೆ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹಿರಿಯೂರು ತಾಲ್ಲೂಕಿನ ಗೊರಲಡುಕು ಬಳಿಯ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಜಗದೀಶ್ (42) ಎಂದು ಗುರುತಿಸಲಾಗಿದೆ. ಓಂಕಾರ್ (26) ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ತಡರಾತ್ರಿ ಅಪಘಾತ ಸಂಭವಿಸಿದೆ.
ಜಗದೀಶ್ ಅವರು ಹೊಸದುರ್ಗದಿಂದ ಈರುಳ್ಳಿ ತುಂಬಿಕೊಂಡು ಬೆಂಗಳೂರು ಕಡೆ ಹೊರಟಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಈರುಳ್ಳಿ ತುಂಬಿದ ಟಾಟಾ ಏಸ್ ನಜ್ಜುಗುಜ್ಜಾಗಿದೆ ಎಂದು ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.