ತರಳಬಾಳು ಮಠ
ಸಿರಿಗೆರೆ: ಪ್ರಮುಖ ಧಾರ್ಮಿಕ ಸಂಸ್ಥೆಗಳಲ್ಲಿ ಒಂದಾದ ತರಳಬಾಳು ಮಠದಿಂದ 3 ವರ್ಷಗಳ ಕಾಲ ಬಿಎ, ಬಿಕಾಂ ಮತ್ತು ಬಿ.ಎಸ್ಸಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಕರ್ಯಗಳನ್ನು ನೀಡುತ್ತಿದೆ.
ಅದಕ್ಕಾಗಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಮಠದ ಶಿವಕುಮಾರ ಸ್ವಾಮೀಜಿ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಅಕ್ಕಮಹಾದೇವಿ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
ತರಳಬಾಳು ಸಂಸ್ಥೆಯು ಸಿರಿಗೆರೆಯಲ್ಲಿ ನಡೆಸುತ್ತಿರುವ ಎಂ. ಬಸವಯ್ಯ ವಸತಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪದವಿ ತರಗತಿಗಳಿಗೆ ದಾಖಲಾತಿ ಪಡೆಯಬೇಕು. ಸಾಮಾನ್ಯ ಪದವಿ ಶಿಕ್ಷಣದತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಈ ಸೌಲಭ್ಯವನ್ನು ನೀಡಲಾಗುತ್ತಿದೆ ಎಂದು ಕಾಲೇಜು ಪ್ರಾಚಾರ್ಯ ಶಿವಬಸವ ಕುಟಗಿಮಠ ತಿಳಿಸಿದರು.
ಕಾಲೇಜು ದಾವಣಗೆರೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿದ್ದು, ಕಾಲೇಜಿನಲ್ಲಿ ಶೈಕ್ಷಣಿಕ ಬೆಳವಣಿಗೆಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಸುಸಜ್ಜಿತ ಗ್ರಂಥಾಲಯ, ಪ್ರಯೋಗಾಲಯಗಳು, ಕಂಪ್ಯೂಟರ್ ಶಿಕ್ಷಣ ನೀಡುವ ವ್ಯವಸ್ಥೆಯೂ ಕಾಲೇಜಿನಲ್ಲಿದೆ. 1968ರಲ್ಲಿ ಸ್ಥಾಪನೆಯಾದ ಈ ಕಾಲೇಜಿನಲ್ಲಿ ಓದಿರುವ ಸಾವಿರಾರು ವಿದ್ಯಾರ್ಥಿಗಳು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಾಚಾರ್ಯರು ಹೇಳಿದರು.
ಆಸಕ್ತ ಪೋಷಕರು, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಕಾಲೇಜು ಪ್ರಾಚಾರ್ಯರನ್ನು ಸಂಪರ್ಕಿಸಬಹುದು. ಮೊ: 70194 65953, 82173 85439, 83107 31013.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.