ADVERTISEMENT

ಆಕ್ಸಿಜನ್‌ ಹಾಸಿಗೆಯಲ್ಲಿ 38 ಜನ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 3:09 IST
Last Updated 27 ಏಪ್ರಿಲ್ 2021, 3:09 IST

ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಮವಾರ 90 ಜನರಲ್ಲಿ ಕೋವಿಡ್‌ ಕಾಣಿಸಿಕೊಂಡಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 16,737ಕ್ಕೆ ಏರಿಕೆಯಾಗಿದೆ. 12 ರೋಗಿಗಳು ಐಸಿಯು ಹಾಗೂ 38 ಜನರು ಆಕ್ಸಿಜನ್‌ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 36, ಹಿರಿಯೂರು 18, ಹೊಸದುರ್ಗ 10, ಚಳ್ಳಕೆರೆ 7, ಹೊಳಲ್ಕೆರೆ, ಮೊಳಕಾಲ್ಮುರು ತಾಲ್ಲೂಕಿನಲ್ಲಿ ತಲಾ 5 ಹಾಗೂ ಹೊರ ಜಿಲ್ಲೆಯ 9 ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 1,448 ಜನರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇನ್ನೂ 621 ಜನರ ವರದಿ ಬರುವುದು ಬಾಕಿ ಇದೆ.

ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 84 ಜನರು ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 15,784 ಜನರು ಗುಣಮುಖರಾಗಿದ್ದು, ಸದ್ಯ 883 ಸಕ್ರಿಯ ಪ್ರಕರಣಗಳಿವೆ. 70 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ADVERTISEMENT

883 ಸಕ್ರಿಯ ಪ್ರಕರಣಗಳಲ್ಲಿ 658ಕ್ಕೂ ಹೆಚ್ಚು ಜನರು ಮನೆಯಲ್ಲೇ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ 38 ಜನರು ದಾಖಲಾಗಿದ್ದಾರೆ. 50 ಜನರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು
ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.