ಚಿತ್ರದುರ್ಗ: ಇ ಸ್ವತ್ತು ತಿದ್ದುಪಡಿಗೆ ₹ 6 ಸಾವಿರ ಲಂಚ ಪಡೆಯುತ್ತಿದ್ದ ಹೊಸದುರ್ಗ ತಾಲ್ಲೂಕಿನ ಕುರುಬರಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಜಗದೀಶ್ ಹಾಗೂಪಿಡಿಒ ಬಸವರಾಜ ಎಂಬುವರು ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಲಂಚದ ರೂಪದಲ್ಲಿ ಪಡೆದ ₹ 6 ಸಾವಿರ ನಗದು ಜಪ್ತಿ ಮಾಡಿದ್ದಾರೆ.
ಗವಿರಂಗಾಪುರದ ಬೇಕರಿ ಮಾಲೀಕ ಲೋಕೇಶ್ ಎಂಬುವರಿಗೆ ಇ ಸ್ವತ್ತು ಮಾಡಿಕೊಂಡಲು ₹ 6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಬಸ್ ನಿಲ್ದಾಣದ ಬಳಿ ಶುಕ್ರವಾರ ಲಂಚದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.