
ಪ್ರಾತಿನಿಧಿಕ ಪತ್ರ
ಮೊಳಕಾಲ್ಮುರು: ಇಲ್ಲಿನ ‘ಪಿಎಂಶ್ರೀ ಆದರ್ಶ ಕೇಂದ್ರೀಯ ವಿದ್ಯಾಲಯ’ದಲ್ಲಿ 2026– 27ನೇ ಸಾಲಿನ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಆಹ್ವಾನಿಸಲಾಗಿದೆ.
ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬೇರೆ ತಾಲ್ಲೂಕಿನಲ್ಲಿ ಅಭ್ಯಾಸ ಮಾಡುತ್ತಿರುವ ಈ ತಾಲ್ಲೂಕಿನ ಮೂಲದ ವಿದ್ಯಾರ್ಥಿಗಳು ತಾಲ್ಲೂಕಿನ ನಿವಾಸಿ ದೃಢೀಕರಣ ಜತೆ ಅರ್ಜಿ ಸಲ್ಲಿಸಬಹುದಾಗಿದೆ.
ಮಾರ್ಚ್ 15ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆ. 25 ಕೊನೆ ದಿನವಾಗಿದೆ. ವಿದ್ಯಾರ್ಥಿಗಳ ಎಸ್‌ಎಟಿಎಸ್ ಸಂಖ್ಯೆ, ಆಧಾರ್ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಷೋಷಕರ ಕಾಯಂ ಮೊಬೈಲ್ ಸಂಖ್ಯೆ, 2 ಪಾಸ್ ಪೋರ್ಟ್ ಫೋಟೋ, 5ನೇ ತರಗತಿ ಓದುತ್ತಿರುವ ಶಾಲೆಯ ಶಿಕ್ಷಕರ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು.
www.schooleducation.kar.nic.in ಅಥವಾ www.vidyavahini.kar.gov.in ಈ ಇ ಮೇಲ್‌ಗೆ ಅಪ್‌ಲೋಡ್ ಮಾಡಬೇಕು. ಹೆಚ್ಚಿನ ವಿವರಗಳಿಗೆ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.