ADVERTISEMENT

ಪೋಕ್ಸೊ ಪ್ರಕರಣ: ಶಿವಮೂರ್ತಿ ಶರಣರ ಖುದ್ದು ಹಾಜರಾತಿಗೆ ನ್ಯಾಯಾಲಯ ಆದೇಶ

​ಪ್ರಜಾವಾಣಿ ವಾರ್ತೆ
Published 30 ಜೂನ್ 2025, 12:36 IST
Last Updated 30 ಜೂನ್ 2025, 12:36 IST
<div class="paragraphs"><p>ಶಿವಮೂರ್ತಿ ಮುರುಘಾ ಶರಣರ</p></div>

ಶಿವಮೂರ್ತಿ ಮುರುಘಾ ಶರಣರ

   

ಚಿತ್ರದುರ್ಗ: ಶಿವಮೂರ್ತಿ ಶರಣರ ವಿರುದ್ಧ ನಡೆಯುತ್ತಿರುವ ಪೋಕ್ಸೊ ಪ್ರಕರಣಗಳ ವಿಚಾರಣೆಗಾಗಿ ಶರಣರು ಜುಲೈ 3ರಂದು ಕೋರ್ಟ್‌ಗೆ ಖುದ್ದಾಗಿ ಹಾಜರಾಗಬೇಕು ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರು ಸೋಮವಾರ ಆದೇಶಿಸಿದ್ದಾರೆ.

2 ಪೋಕ್ಸೊ ಪ್ರಕರಣಗಳ ಸಂಬಂಧ ಷರತ್ತುಬದ್ಧ ಜಾಮೀನು ನೀಡುವಾಗ ಶರಣರು ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂದು ಹೈಕೋರ್ಟ್‌ ಆದೇಶಿಸಿತ್ತು. ಹೀಗಾಗಿ ಅವರು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣಾ ಪ್ರಕ್ರಿಯೆಗೆ ವಿಡಿಯೊ ಸಂವಾದದ ಮೂಲಕ ಪಾಲ್ಗೊಳ್ಳುತ್ತಿದ್ದರು. ಅವರು ಸದ್ಯ ದಾವಣಗೆರೆಯ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದಾರೆ.

ADVERTISEMENT

‘ವಿಚಾರಣಾ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು ಖುದ್ದು ಹೇಳಿಕೆ ದಾಖಲು ಮಾಡುವುದು ಅವಶ್ಯವಾಗಿದೆ. ಹೇಳಿಕೆ ನೀಡಿದ ನಂತರ ಅವರು ಜಿಲ್ಲೆಯನ್ನು ತೊರೆಯಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ’ ಎಂದು ವಕೀಲರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.