ADVERTISEMENT

ಪೋಕ್ಸೊ ಪ್ರಕರಣ: ನ. 5 ರವರೆಗೆ ಮುರುಘಾಶ್ರೀ ಪೊಲೀಸ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2022, 11:37 IST
Last Updated 3 ನವೆಂಬರ್ 2022, 11:37 IST
ಶಿವಮೂರ್ತಿ ಮುರುಘಾ ಶರಣರು
ಶಿವಮೂರ್ತಿ ಮುರುಘಾ ಶರಣರು   

ಚಿತ್ರದುರ್ಗ: ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಎರಡನೇ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದರು.

ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಕಾರಣಕ್ಕೆ ಮುರುಘಾಶ್ರೀ ಅವರನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಎರಡನೇ ಪೋಕ್ಸೊ ಪ್ರಕರಣದ ತನಿಖೆ ನಡೆಸುತ್ತಿರುವ ಗ್ರಾಮಾಂತರ ಠಾಣೆಯ ಪೊಲೀಸರು ಎಂಟು ದಿನ ವಶಕ್ಕೆ ನೀಡುವಂತೆ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದರು.

ಎಂಟು ದಿನ ಪೊಲೀಸ್ ವಶಕ್ಕೆ ನೀಡುವುದಕ್ಕೆ ಶರಣರ ಪರ ವಕೀಲರು ಆಕ್ಷೇಪ ಸಲ್ಲಿಸಿದರು. ನ. 5ರ ಸಂಜೆ 4 ಗಂಟೆಯ ವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಆದೇಶಿಸಿದರು. ಪೋಕ್ಸೊ ಪ್ರಕರಣದ ಎರಡನೇ ಆರೋಪಿ ಹಾಸ್ಟಲ್ ವಾರ್ಡನ್ ಹಾಗೂ ನಾಲ್ಕನೇ ಆರೋಪಿ ಪರಮಶಿವಯ್ಯ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ನ.8 ರವರೆಗೆ ವಿಸ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.