
ಪ್ರಜಾವಾಣಿ ವಾರ್ತೆ
ಚಿತ್ರದುರ್ಗ: ಇಲ್ಲಿನ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದ ಆದೇಶವನ್ನು ಬುಧವಾರ (ನ. 26) 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ಕೋರ್ಟ್‌ನ ನ್ಯಾಯಾಧೀಶ ಗಂಗಾಧರಪ್ಪ ಹಡಪದ ಅವರು ಬೆಳಿಗ್ಗೆ 11ಕ್ಕೆ ಪ್ರಕಟಿಸಲಿದ್ದಾರೆ.
ಸುಪ್ರೀಂ ಕೋರ್ಟ್ ಸೂಚನೆಯಂತೆ ಶರಣರ ವಿರುದ್ಧ ದಾಖಲಾಗಿರುವ 2 ಪೋಕ್ಸೊ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ಸುದೀರ್ಘ ವಿಚಾರಣೆ ನಡೆದಿದೆ. ಆರೋಪಿ, ಸಂತ್ರಸ್ತೆ ಹಾಗೂ ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ದೋಷಾರೋಪ ಪಟ್ಟಿಯ ಅಂಶಗಳಿಗೆ ಎರಡೂ ಕಡೆಯಿಂದ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಪಾಟಿ ಸವಾಲು ನಡೆಸಲಾಗಿದೆ.
ನ.18ರಂದು ಸರ್ಕಾರಿ ವಕೀಲರ ಅಂತಿಮ ವಾದ ಆಲಿಸಿದ್ದ ನ್ಯಾಯಾಧೀಶರು ಆದೇಶ ಕಾಯ್ದಿರಿಸಿದ್ದರು. ಶರಣರ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.