ADVERTISEMENT

ಕೊಡಗವಳ್ಳಿ ಹಟ್ಟಿ: ಪೊಲೀಸ್ ಕಾನ್ ಸ್ಟೇಬಲ್ ಪತ್ನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 14 ಮೇ 2019, 9:45 IST
Last Updated 14 ಮೇ 2019, 9:45 IST
   

ಹೊಳಲ್ಕೆರೆ:ಮೇ 4ರ ರಾತ್ರಿ ಬೈಕ್ ಅಪಘಾತದಲ್ಲಿ ಮೃತಪಟ್ಟ ಪಟ್ಟಣದ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಆನಂದ್ ಅವರ ಪತ್ನಿ ಸುಮಿತ್ರಾ (28) ಮಂಗಳವಾರ ಬೆಳಿಗ್ಗೆ ಕೊಡಗವಳ್ಳಿ ಹಟ್ಟಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಮಿತ್ರಾ ಅವರಿಗೆ ಇಬ್ಬರು ಚಿಕ್ಕ ಮಕ್ಕಳಿದ್ದು, ಪತಿಯ ಸಾವಿನ ನೋವಿನಿಂದ ಹೊರಬರಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT