ADVERTISEMENT

ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಮನವಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 5:40 IST
Last Updated 18 ಡಿಸೆಂಬರ್ 2025, 5:40 IST
ಟಿ.ವೆಂಕಟೇಶ್‌
ಟಿ.ವೆಂಕಟೇಶ್‌   

ಚಿತ್ರದುರ್ಗ: ‘ಜಿಲ್ಲೆಯಾದ್ಯಂತ ಡಿ.21 ರಿಂದ 24ರವರೆಗೆ ಪಲ್ಸ್‌ ಪೋಲಿಯೊ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಎರಡು ಹನಿ ಲಸಿಕೆ ಹಾಕಿಸಬೇಕು’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಮನವಿ ಮಾಡಿದ್ದಾರೆ.

‘ನೆರೆಯ ಪಾಕಿಸ್ತಾನ, ಅಫ್ಘಾನಿಸ್ತಾನದಲ್ಲಿ ಪೋಲಿಯೊ ಪ್ರಕರಣಗಳು ವರದಿಯಾಗಿವೆ. ಆದ್ದರಿಂದ ಅದರ ಪುನರ್‌ ಆಗಮನ ತಡೆಯಲು, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಾಪಾಡುವುದು, ಪೋಲಿಯೊದಿಂದ ಮಕ್ಕಳನ್ನು ರಕ್ಷಿಸುವ ಉದ್ದೇಶದಿಂದ ದೇಶದಾದ್ಯಂತ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಇದರ ಯಶಸ್ವಿಗೆ ಜಿಲ್ಲೆಯ ನಾಗರಿಕರು, ಸಂಘ-ಸಂಸ್ಥೆಗಳು, ವಿವಿಧ ಇಲಾಖೆಗಳು ಸಹಕರಿಸಬೇಕು’ ಎಂದು ಕೋರಿದ್ದಾರೆ.

‘ಈ ಹಿಂದೆ ಎಷ್ಟೇ ಬಾರಿ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿದ್ದರೂ ಸಹ, ಡಿ.21ರಂದು ಲಸಿಕೆ ಹಾಕಿಸಬೇಕು. ಜಿಲ್ಲೆಯಲ್ಲಿ 1169 ಬೂತ್‌ ರಚಿಸಲಾಗಿದ್ದು, 1,26,361 ಮಕ್ಕಳಿಗೆ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.