
ಚಿತ್ರದುರ್ಗ: ‘ಜಿಲ್ಲೆಯಲ್ಲಿ 8 ಅಂಚೆ ಕಚೇರಿಗಳ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸಂವಹನ ಸಚಿವಾಲಯದಿಂದ ₹3.40 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ’ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.
‘ಜಿಲ್ಲೆಯ ದೊಡ್ಡ ಗ್ರಾಮಗಳಲ್ಲಿ ಅಂಚೆ ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಇದನ್ನು ಗಮನಿಸಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸ್ತಾವನೆಯನ್ನು ಅನುಮೋದಿಸಿದ ಕೇಂದ್ರ ಸಂವಹನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಅನುದಾನ ಬಿಡುಗಡೆ ಮಾಡಿದ್ದಾರೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
‘ಆದಿವಾಲ, ಭೀಮಸಮುದ್ರ, ಚಿಕ್ಕಜಾಜೂರು, ಓಬಳಾಪುರ, ಪರಶುರಾಂಪುರ, ಕೊಂಡ್ಲಹಳ್ಳಿ, ರಾಂಪುರ, ಬೆಲಗೂರು ಗ್ರಾಮದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ. ಶೀಘ್ರದಲ್ಲಿ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.