ADVERTISEMENT

ಹೊಸದುರ್ಗ | ವಿದ್ಯುತ್ ವ್ಯತ್ಯಯ ಜೂನ್ 25ರಿಂದ

​ಪ್ರಜಾವಾಣಿ ವಾರ್ತೆ
Published 23 ಜೂನ್ 2025, 14:02 IST
Last Updated 23 ಜೂನ್ 2025, 14:02 IST

ಹೊಸದುರ್ಗ: ತಾಲ್ಲೂಕಿನ ಶ್ರೀರಾಂಪುರ ಉಪವಿಭಾಗದ ಕಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸದಾಗಿ ಸ್ಥಾಪಿಸಿರುವ ಸೋಲಾರ್ ಪವರ್ ಪ್ಲಾಂಟ್ ಹೊಸ ಮಾರ್ಗಗಳನ್ನು ನಿರ್ಮಿಸುವ ಕಾಮಗಾರಿ ಆರಂಭಿಸಲಾಗುವುದು. ಆದ್ದರಿಂದ ಜೂನ್ 25ರಿಂದ ಜುಲೈ 7ರವರೆಗೆ ಮಧ್ಯಾಹ್ನ 12ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಕಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಶ್ರೀರಾಂಪುರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT