ಹಿರಿಯೂರು: ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜ, ವಾಲ್ಮೀಕಿ ನಾಯಕ ನೌಕರರ ಸಂಘ ಮತ್ತು ವಾಲ್ಮೀಕಿ ನಾಯಕ ನಿವೃತ್ತ ನೌಕರರ ಸಂಘಗಳ ನೇತೃತ್ವದಲ್ಲಿ ನಗರದ ನೆಹರು ಮೈದಾನದಲ್ಲಿರುವ ಎ. ಕೃಷ್ಣಪ್ಪ ರೋಟರಿ ಸಭಾ ಭವನದಲ್ಲಿ ಆಗಸ್ಟ್ 10 ರಂದು ಬೆಳಿಗ್ಗೆ 10.30 ಕ್ಕೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 85 ಕ್ಕಿಂತ ಹೆಚ್ಚು ಅಂಕ ಪಡೆದಿರುವ ತಾಲ್ಲೂಕಿನ ನಾಯಕ ಸಮುದಾಯದ ವಿದ್ಯಾರ್ಥಿಗಳು ಭಾವಚಿತ್ರ, ಅಂಕಪಟ್ಟಿ, ಆಧಾರ್ ಕಾರ್ಡ್ ಹಾಗೂ ಜಾತಿ ಪ್ರಮಾಣದ ಪತ್ರದ ನಕಲು ಪ್ರತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ತೇರುಮಲ್ಲೇಶ್ವರಸ್ವಾಮಿ ದೇವಸ್ಥಾನದ ರಸ್ತೆಯಲ್ಲಿರುವ ಶಿವ ಪ್ರಿಂಟರ್ಸ್ ಅಂಗಡಿಗೆ ಆಗಸ್ಟ್ 2ರ ಒಳಗೆ ಕೊಡುವಂತೆ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.