ಪ್ರಣವಾನಂದ ಸ್ವಾಮೀಜಿ
ಚಿತ್ರದುರ್ಗ: ‘ಈಡಿಗ ಸಮುದಾಯವನ್ನು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಪ್ರಮುಖ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ’ ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ದೂರಿದರು.
‘ಬೆಂಗಳೂರಿನ ವಿಧಾನಸೌಧ ಮುಂದೆ ನಾರಾಯಣ ಗುರೂಜಿಯವರ ಪುತ್ಥಳಿ ನಿರ್ಮಾಣ ಮಾಡಬೇಕು. ಈಡಿಗ ನಿಗಮಕ್ಕೆ ₹ 500 ಕೋಟಿ ನೀಡಬೇಕು. ಇವುಗಳ ಜತೆಗೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 2026ರ ಜ.16ರಿಂದ ಕಲಬುರಗಿ ಜಿಲ್ಲೆಯ ಚಿತ್ತಾಪುರದ ಗುರುಪೀಠದಿಂದ ಬೆಂಗಳೂರಿನವರೆಗೆ 46 ದಿನಗಳ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮುದಾಯದವರು ಜಾತಿ ಕಾಲಂನಲ್ಲಿ ಈಡಿಗ, ಉಪ ಜಾತಿಯಲ್ಲಿ ಈಡಿಗ, ನಾಮಧಾರಿ, ಬಿಲ್ಲವ, ದೀವರು ಎಂದು ಬರೆಸಬೇಕು. ಸಮೀಕ್ಷೆಯಲ್ಲಿ ಎಲ್ಲರೂ ತಪ್ಪದೇ ಭಾಗವಹಿಸಬೇಕು’ ಎಂದರು.
‘27 ರಂದು ಹಿರಿಯೂರು ತಾಲ್ಲೂಕಿನ ಪಿಲಾಜನಹಳ್ಳಿ ಗ್ರಾಮದಲ್ಲಿ ನಾರಾಯಣ ಗುರೂಜಿಗಳ 171ನೇ ಜಯಂತಿ ಹಾಗೂ ಈಡಿಗ ಸಮುದಾಯದ ಚಿಂತನ ಮಂಥನ ಸಭೆ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.
ಈಡಿಗ ಮಹಾಮಂಡಳಿ ರಾಜ್ಯ ಘಟಕದ ಅಧ್ಯಕ್ಷ ಸಿ.ತಿಪ್ಪೇಸ್ವಾಮಿ, ಮುಖಂಡರಾದ ರಮೇಶ್, ಲೋಕೇಶ್, ರೋಹನ್, ಪ್ರವೀಣ ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.