ADVERTISEMENT

ನ್ಯಾಯಾಧೀಶರತ್ತ ಚಪ್ಪಲಿ ಎಸೆದ ವ್ಯಕ್ತಿಗೆ ಜೈಲು

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2019, 12:27 IST
Last Updated 12 ಮಾರ್ಚ್ 2019, 12:27 IST
   

ಹೊಳಲ್ಕೆರೆ: ನ್ಯಾಯಾಲಯದ ಕಲಾಪ ನಡೆಯುತ್ತಿರುವಾಗ ನ್ಯಾಯಪೀಠದತ್ತ ಚಪ್ಪಲಿ ಎಸೆದ ವ್ಯಕ್ತಿಗೆ 4 ವರ್ಷ 9 ತಿಂಗಳು ಕಾರಾಗೃಹ ಶಿಕ್ಷೆ ಹಾಗೂ ₹ 5,500 ದಂಡ ವಿಧಿಸಲಾಗಿದೆ.

2016ರ ಡಿ.23ರಂದು ಹೊಸದುರ್ಗದ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶ ಟಿ. ಶ್ರೀಕಾಂತ್ ಅವರು ಕಾರ್ಯ ಕಲಾಪ ನಡೆಸುತ್ತಿರುವಾಗ ಬಿ.ಎಂ. ಶಿವಣ್ಣ ಎಂಬ ಆರೋಪಿ ನ್ಯಾಯಾಧೀಶರತ್ತ ಚಪ್ಪಲಿ ಎಸೆದಿದ್ದ. ನ್ಯಾಯಾಧೀಶರು ಹಾಗೂ ನ್ಯಾಯಪೀಠಕ್ಕೆ ಅಗೌರವ ತೋರಿಸಿದ್ದರಿಂದ ಹೊಸದುರ್ಗ ಪೊಲೀಸರು ಆರೋಪಿಯ ವಿರುದ್ಧ ದೂರು ದಾಖಲಿಸಿದ್ದರು.

ಪಟ್ಟಣದ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ವಿ.ರವಿಕುಮಾರ್ ವಿಚಾರಣೆ ನಡೆಸಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ ಎಂದು ಸಹಾಯಕ ಸರ್ಕಾರಿ ಅಭಿಯೋಜಕ ಡಿ.ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.