ಹಿರಿಯೂರು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಕೆಲವು ಪ್ರಯಾಣಿಕರು ಗಾಯಗೊಂಡ ಘಟನೆ ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ.
ಬೆಂಗಳೂರಿನಿಂದ ತೇರದಾಳಕ್ಕೆ ಹೊರಟಿದ್ದ ಬಸ್ ಉರುಳಿ ಬಿದ್ದಿದ್ದರಿಂದ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ವಾಹನಗಳು ಮುಂದೆ ಹೋಗಲು ಸಾಧ್ಯವಾಗದೇ ಐದಾರು ಕಿ.ಮೀ. ಸಾಲುಗಟ್ಟಿ ನಿಂತಿದ್ದವು.
ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿದ ಗ್ರಾಮಾಂತರ ಠಾಣೆ ಎಸ್ಐಗಳಾದ ಮಹೇಶ್ ಗೌಡ ಹಾಗೂ ಅನುಸೂಯಮ್ಮ ಅವರು ರಸ್ತೆ ಮಧ್ಯದಿಂದ ಬಸ್ ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಗಾಯಾಳುಗಳಿಗೆ ಜವನಗೊಂಡನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.