ADVERTISEMENT

ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 10:54 IST
Last Updated 29 ಜೂನ್ 2020, 10:54 IST
ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳನ್ನು ವಿರೋಧಿಸಿ ಅಖಿಲ ಭಾರತ ಕಿಸಾನ್ ಸಭಾ ರಾಜ್ಯ ಮಂಡಳಿ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು 
ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳನ್ನು ವಿರೋಧಿಸಿ ಅಖಿಲ ಭಾರತ ಕಿಸಾನ್ ಸಭಾ ರಾಜ್ಯ ಮಂಡಳಿ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು    

ಚಿತ್ರದುರ್ಗ: ಭೂ ಸುಧಾರಣೆ, ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ ಭಾರತ ಕಿಸಾನ್ ಸಭಾ ಪದಾಧಿಕಾರಿಗಳು ಚೋಳಗಟ್ಟ ಗ್ರಾಮ ಪಂಚಾಯಿತಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಯಾವ ಕಾರಣಕ್ಕೂ ರಾಜ್ಯದಲ್ಲಿ ಈ ಕಾಯ್ದೆಗಳ ತಿದ್ದುಪಡಿ ಆಗಬಾರದು. ರಾಜ್ಯ ಸರ್ಕಾರ ಉತ್ತಮ ನಿರ್ಣಯ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಒತ್ತಾಯಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೂಲಕ ಮನವಿ ಸಲ್ಲಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ. ಲಾಕ್‌ಡೌನ್ ಘೋಷಣೆ ವೇಳೆ ಕೇವಲ 500 ಇದ್ದ ಸೋಂಕಿತರ ಸಂಖ್ಯೆ ಈಗ 3 ಲಕ್ಷ ಗಡಿದಾಟಿದೆ. ಇದು ಹೀಗೆ ಮುಂದುವರೆದವರೆ ವಿಶ್ವದಲ್ಲೇ ಪ್ರಥಮ ಸ್ಥಾನ ಪಡೆದರೂ ಅಚ್ಚರಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಸರ್ಕಾರಗಳು ಲಾಕ್‌ಡೌನ್ ಪರಿಸ್ಥಿತಿ ದುರುಪಯೋಗಪಡಿಸಿಕೊಂಡಿವೆ. ಇಡೀ ದೇಶದ ಕೃಷಿ ಉತ್ಪಾದನೆ ಮತ್ತು ಕೃಷಿ ಮಾರುಕಟ್ಟೆಯನ್ನು ಕಾರ್ಪೊರೇಟ್ ಕಂಪನಿಗಳಿಗೆ ಒಪ್ಪಿಸಲು ಕಾನೂನು ತಿದ್ದುಪಡಿಗೆ ಮುಂದಾಗಿವೆ ಎಂದು ದೂರಿದರು.

ಎಐಟಿಯುಸಿ ಗೌರವಾಧ್ಯಕ್ಷ ಸಿ.ವೈ.ಶಿವರುದ್ರಪ್ಪ, ಎಐಕೆಎಸ್ ರಾಜ್ಯ ಘಟಕದ ಅಧ್ಯಕ್ಷ ದೊಡ್ಡ ಉಳ್ಳಾರ್ತಿ ಕರಿಯಣ್ಣ, ರಾಜ್ಯ ಮಂಡಳಿ ಸದಸ್ಯ ಟಿ.ಆರ್.ಉಮಾಪತಿ, ಮುಖಂಡರಾದ ಜಿ.ಸಿ.ಸುರೇಶ್ ‌ಬಾಬು, ಕೆ.ಇ.ಸತ್ಯಕೀರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.