ADVERTISEMENT

ಪ್ರತಿಭಟನೆ: ಕಾಂಗ್ರೆಸ್‌ ಮುಖಂಡರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 3:59 IST
Last Updated 14 ಜೂನ್ 2021, 3:59 IST

ಚಿತ್ರದುರ್ಗ: ‘ತೈಲ ಬೆಲೆ ಏರಿಕೆ ಖಂಡಿಸಿ ಜಿಲ್ಲೆಯ ಹಿರಿಯೂರು ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆದಿತ್ತು. ಈ ಸಂಬಂಧ ಕೋವಿಡ್ ನಿಯಮ ಉಲ್ಲಂಘನೆಯಡಿ ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ತಿಳಿಸಿದ್ದಾರೆ.

‘ಪ್ರತಿಭಟನೆಗೆ ಜಿಲ್ಲೆಯಲ್ಲಿ ಅವಕಾಶ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಲಾಗಿತ್ತು. ಈ ನಡುವೆಯೂ ನೂರಾರು ಸಂಖ್ಯೆಯ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದರು ಎಂಬ ದೂರು ಆಧರಿಸಿ, ಅಲ್ಲಿಯ ನಗರಠಾಣೆ ಪಿಎಸ್‌ಐ ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಸದ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಖಜಾಂಜಿ ಜ್ಞಾನೇಶ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರತಿಭಟನೆಯ ವಿಡಿಯೊ ಪರಿಶೀಲಿಸಿ, ತನಿಖೆ ಪೂರ್ಣಗೊಂಡ ನಂತರ ಇನ್ನೂ ಕೆಲವರ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.