ADVERTISEMENT

ಒಂದೇ ಸೆಮಿಸ್ಟರ್‌ ಪರೀಕ್ಷೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಜುಲೈ 2021, 13:59 IST
Last Updated 28 ಜುಲೈ 2021, 13:59 IST
ಡಿಪ್ಲೊಮಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ಬದಲು ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ಸಂಘಟನೆ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು
ಡಿಪ್ಲೊಮಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ಬದಲು ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ಸಂಘಟನೆ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು   

ಚಿತ್ರದುರ್ಗ: ಡಿಪ್ಲೊಮಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್‌ ಆರ್ಗನೈಸೇಷನ್ (ಎಐಡಿಎಸ್‌ಒ), ಜಿಲ್ಲಾ ಮಟ್ಟದ ಡಿಪ್ಲೊಮಾ ವಿದ್ಯಾರ್ಥಿಗಳ ಹೋರಾಟ ಸಮಿತಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಒಂದು ತಿಂಗಳ ಹೋರಾಟದ ಫಲವಾಗಿ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿರುವುದು ಸ್ವಾಗತಾರ್ಹ. ಅದೇ ರೀತಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಅನ್ವಯವಾಗುವಂತೆ ಆದೇಶ ಜಾರಿಗೊಳಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

ಅಂತಿಮ ವರ್ಷದ ವಿದ್ಯಾರ್ಥಿಗಳು ಮೂರು ಪರೀಕ್ಷೆಗಳನ್ನು ಅಕ್ಟೋಬರ್ ತಿಂಗಳೊಳಗೆ ಎದುರಿಸುವ ಸಮಸ್ಯೆಯಿಂದಾಗಿ ಆತಂಕಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಯಾವುದಾದರೂ ಒಂದು ಸೆಮಿಸ್ಟರ್ ಪರೀಕ್ಷೆಯನ್ನಾದರೂ ರದ್ದುಗೊಳಿಸಬೇಕು. ಆಗ ಮಾತ್ರ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ಕಡಿಮೆಯಾಗಲಿದ್ದು, ಪರೀಕ್ಷಾ ತಯಾರಿ ನಡೆಸಲು ಸಹಕಾರಿಯಾಗಲಿದೆ. ಈ ಕುರಿತು ತ್ವರಿತವಾಗಿ ನಿರ್ಧಾರ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಕೋರಿದರು.

ADVERTISEMENT

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸಂಜಯ್, ಸದಸ್ಯರಾದ ನಿಂಗರಾಜು, ನಾಗರಾಜ್, ವಿದ್ಯಾರ್ಥಿಗಳಾದ ಆಕಾಶ್ ನಾಡಿಗ್, ಅಭಿ, ಚಿರಂಜೀವಿ, ಸಂದೇಶ್, ಈಶ್ವರ್, ಚಂದನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.