ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 4:06 IST
Last Updated 2 ಡಿಸೆಂಬರ್ 2022, 4:06 IST
ಚಳ್ಳಕೆರೆ ಅಂಗನವಾಡಿ ಕಾರ್ಯಕರ್ತೆಯರು ಗುರುವಾರ ಪ್ರತಿಭಟನೆ ನಡೆಸಿದರು
ಚಳ್ಳಕೆರೆ ಅಂಗನವಾಡಿ ಕಾರ್ಯಕರ್ತೆಯರು ಗುರುವಾರ ಪ್ರತಿಭಟನೆ ನಡೆಸಿದರು   

ಚಳ್ಳಕೆರೆ: ಪೂರಕ ಪೌಷ್ಟಿಕ ಆಹಾರ, ರೋಗನಿರೋಧಕ ಚುಚ್ಚುಮದ್ದು, ಆರೋಗ್ಯ ತಪಾಸಣೆ, ಅಗತ್ಯ ಮಾಹಿತಿ ಸೇವೆ, ಪೂರ್ವ ಪ್ರಾಥಮಿಕ ಶಿಕ್ಷಣ ಹಾಗೂ ಗ್ರಾಚ್ಯುಟಿ ಪಾವತಿಗೆ ನಿರ್ದೇಶನ ಮುಂತಾದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರು ಗುರುವಾರ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಂತರ ತಾಲ್ಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

‘ಅಂಗನವಾಡಿಗಳನ್ನು ಬರೀ ಅಂಕಿ- ಅಂಶಗಳ ಕೆಲಸಕ್ಕೆ ಸೀಮಿತವಾಗಿಸಬಾರದು. ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪೂರ್ವ ಪ್ರಾಥಮಿಕ ಶಿಕ್ಷಣದ ವ್ಯವಸ್ಥೆ ಮಾಡಬೇಕು. ಅಂಗನವಾಡಿ ಕೇಂದ್ರದ ಅನುದಾನವನ್ನು ₹ 20 ಲಕ್ಷಕ್ಕೆ ಹೆಚ್ಚಿಸಬೇಕು. ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಬ್ಯಾಗ್ ಉಚಿತ ವಿತರಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಅಂಗನವಾಡಿ ಕಾರ್ಯಕರ್ತೆಯರ ತಾಲ್ಲೂಕು
ಘಟಕದ ಅಧ್ಯಕ್ಷೆ ಇಂದಿರಮ್ಮ, ಸರ್ಕಾರವನ್ನು ಒತ್ತಾಯಿಸಿದರು.

ADVERTISEMENT

ಸ್ತ್ರೀಶಕ್ತಿ, ಭಾಗ್ಯಲಕ್ಷ್ಮೀ, ಮಾತೃವಂದನಾ, ಚುನಾವಣೆ, ಜನಗಣತಿ ಮುಂತಾದ ಕೆಲಸಗಳಿಗೆ ಕಾರ್ಯಕರ್ತೆಯರನ್ನು ತೊಡಗಿಸಿಕೊಳ್ಳುವುದರಿಂದ ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಇಲಾಖೇತರ ಕೆಲಸಗಳಿಗೆ ಕಾರ್ಯಕರ್ತೆಯರನ್ನು ಬಳಸಿಕೊಳ್ಳಬಾರದು ಎಂದು ಪ್ರಧಾನ ಕಾರ್ಯದರ್ಶಿ ಬಿ. ಬೋರಮ್ಮ ಮನವಿ ಮಾಡಿದರು.

ಹಮಾಲಿ ಸಂಘಟನೆಯ ಮುಖಂಡ ಟಿ. ತಿಪ್ಪೇಸ್ವಾಮಿ, ಪುಟ್ಟಮ್ಮ, ಮಂಗಳಮ್ಮ, ಕರಿಬಸಮ್ಮ, ಜಿ. ಗಂಗಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.