ಚಳ್ಳಕೆರೆ: ‘ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮತ್ತು ಉದ್ಯೋಗ ಮೀಸಲು ವಿರೋಧಿಸಿರುವ ಸಚಿವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿ ಕೊರ್ಲಕುಂಟೆ ಗ್ರಾಮದ ಕನ್ನಡ ರಕ್ಷಣಾ ಮತ್ತು ಸಾಂಸ್ಕೃತಿಕ ವೇದಿಕೆ ಕಾರ್ಯಕರ್ತರು ಗುರುವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
‘ನಾಡಿನ ಜನರು ಕಟ್ಟುವ ತೆರಿಗೆಯಲ್ಲಿ ಸೌಲಭ್ಯಗಳನ್ನು ಬಳಸಿಕೊಂಡು ಸ್ಥಾಪಿಸುವ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲು ನೀಡುವುದು ರಾಜ್ಯದಲ್ಲಿ ಕಡ್ಡಾಯಗೊಳಿಸಬೇಕು. ನಾಡು, ನುಡಿ ಮತ್ತು ಸಂಸ್ಕೃತಿ ವಿರೋಧಿಸುವ ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಂತೆ ಕಾನೂನು ಜಾರಿ ಮಾಡಬೇಕು’ ಎಂದು ಸಾಮಾಜಿಕ ಹೋರಾಟಗಾರ ಎಚ್.ಎಸ್. ಸೈಯದ್ ಒತ್ತಾಯಿಸಿದರು.
‘ತಾಲ್ಲೂಕಿನ ಕುದಾಪುರದ ಬಳಿ ಸ್ಥಾಪಿಸಿರುವ ಡಿಆರ್‌ಡಿಒ ವಿಜ್ಞಾನ ಕೇಂದ್ರದಲ್ಲಿ ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸಿ ಕೊಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ವಿಶ್ವಾಸ ಪಡೆದು ಕನ್ನಡಿಗಳ ಉದ್ಯೋಗ ಮೀಸಲು ಮಸೂದೆ ಜಾರಿ ಮಾಡಬೇಕು’ ಎಂದು ವೇದಿಕೆ ಅಧ್ಯಕ್ಷ ಕೊರ್ಲಕುಂಟೆ ತಿಪ್ಪೇಸ್ವಾಮಿ ಮನವಿ ಮಾಡಿದರು.
ಶಿರಸ್ತೇದಾರ್ ಸಂತೋಷ್, ದಲಿತ ಮುಖಂಡ ವಿಜಯಕುಮಾರ್, ದ್ಯಾಮಯ್ಯ ಮೈತ್ರಿ, ವಿರೇಂದ್ರ, ಬಸವರಾಜ, ರಾಜಣ್ಣ, ಎಲ್.ಎಸ್.ಪಾಂಡು, ನಿವೃತ್ತ ಉಪನ್ಯಾಸಕ ತಿಮ್ಮಪ್ಪ, ನಾಗರಾಜ, ತಿಪ್ಪೇಸ್ವಾಮಿ, ಶಶಿಧರ, ಮಂಜುನಾಥ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.