ADVERTISEMENT

‘ಫಲಿತಾಂಶ ಸುಧಾರಣೆಗೆ ಉಪನ್ಯಾಸಕರ ಪ್ರಯತ್ನ ಬದ್ಧತೆಯಿಂದ ಕೂಡಿರಬೇಕು’

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 15:35 IST
Last Updated 3 ಜುಲೈ 2025, 15:35 IST
ಹಿರಿಯೂರಿನ ವಾಗ್ದೇವಿ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಗುರುವಾರ ತಾಲ್ಲೂಕಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ ಆಯೋಜಿಸಿದ್ದ ಚಿಂತನ-ಮಂಥನ ಕಾರ್ಯಕ್ರಮವನ್ನು ಪಿಯು ಉಪನಿರ್ದೇಶಕ ಕೆ.ತಿಮ್ಮಯ್ಯ ಉದ್ಘಾಟಿಸಿದರು
ಹಿರಿಯೂರಿನ ವಾಗ್ದೇವಿ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಗುರುವಾರ ತಾಲ್ಲೂಕಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ ಆಯೋಜಿಸಿದ್ದ ಚಿಂತನ-ಮಂಥನ ಕಾರ್ಯಕ್ರಮವನ್ನು ಪಿಯು ಉಪನಿರ್ದೇಶಕ ಕೆ.ತಿಮ್ಮಯ್ಯ ಉದ್ಘಾಟಿಸಿದರು   

ಹಿರಿಯೂರು: 'ಫಲಿತಾಂಶವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ತೆಗೆದುಕೊಳ್ಳಲಿದೆ’ ಎಂದು ಪಿಯು ಉಪನಿರ್ದೇಶಕ ಕೆ.ತಿಮ್ಮಯ್ಯ ತಿಳಿಸಿದರು. 

ನಗರದ ವಾಗ್ದೇವಿ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಚಿತ್ರದುರ್ಗದ ಉಪ ನಿರ್ದೇಶಕರ ಕಚೇರಿ ನೇತೃತ್ವದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಸುಧಾರಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ ಆಯೋಜಿಸಿದ್ದ ಚಿಂತನ-ಮಂಥನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಫಲಿತಾಂಶ ಸುಧಾರಣೆಗೆ ಉಪನ್ಯಾಸಕರ ಪ್ರಯತ್ನ ಬದ್ದತೆಯಿಂದ ಕೂಡಿರಬೇಕು. ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಾಗದಂತೆ ಕ್ರಮ ಕೈಗೊಂಡಿದ್ದೇನೆ. ಇಲಾಖೆ ಹೊರಡಿಸುವ ನಿಯಮಗಳಿಗೆ ಬದ್ಧರಾಗಿ ಎಲ್ಲರೂ ಕರ್ತವ್ಯ ನಿರ್ವಹಿಸಬೇಕು. ಕೆಲವರು ಕರ್ತವ್ಯದಲ್ಲಿ ತೋರುವ ನಿರ್ಲಕ್ಷವೇ ಫಲಿತಾಂಶ ಕುಸಿತಕ್ಕೆ ಕಾರಣ. ಉಪನ್ಯಾಸಕರು ಬದ್ಧತೆಯಿಂದ ಕಾರ್ಯ ನಿರ್ವಹಿಸಿದಲ್ಲಿ ಉತ್ತಮ ಫಲಿತಾಂಶ ತರಲು ಸಾಧ್ಯ ಎಂದು ಕೆ.ತಿಮ್ಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ಪ್ರತಿ ಕಾಲೇಜಿನಲ್ಲಿ ಉಪನ್ಯಾಸಕರು ಎಲ್ಲಾ ವಿದ್ಯಾರ್ಥಿಗಳನ್ನು ವಿಂಗಡಿಸಿ ಗುಂಪು ಮಾಡಿಕೊಂಡು, ಮಕ್ಕಳ ಮೇಲೆ ಹೆಚ್ಚಿನ ಒತ್ತಡ ಹೇರದೇ ಸಮಸ್ಯೆಗಳನ್ನು ಆಲಿಸಬೇಕು. ಕಾಲೇಜಿಗೆ ಬರುವ ಮಕ್ಕಳಿಗೆ ನಾವು ನ್ಯಾಯ ಒದಗಿಸಿದರೆ ನಮ್ಮ ಮಕ್ಕಳಿಗೆ ಮತ್ತೊಂದು ಕಡೆ ನ್ಯಾಯ ಸಿಗುತ್ತದೆ’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಾಗ್ದೇವಿ ವಿದ್ಯಾಸಂಸ್ಥೆ ಅಧ್ಯಕ್ಷ ಕೆ.ವಿ. ಅಮರೇಶ್, ಪ್ರಾಚಾರ್ಯರ ಸಂಘದ ಅಧ್ಯಕ್ಷ ದೇವೇಂದ್ರಪ್ಪ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಮಲ್ಲೇಶ್, ತಾಲ್ಲೂಕು ಅಧ್ಯಕ್ಷ ಕೆ.ಆರ್.ತಿಪ್ಪೇಸ್ವಾಮಿ, ಪ್ರಾಂಶುಪಾಲರಾದ ನಾಗರಾಜ್, ಟಿ.ತಿಪ್ಪೇಸ್ವಾಮಿ, ಕುಮಾರಯ್ಯ, ಉಪನ್ಯಾಸಕ ಕಾಂತರಾಜ್, ನಿವೃತ್ತ ಪ್ರಾಂಶುಪಾಲ ನಾಗಣ್ಣ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.