
ಧರ್ಮಪುರ: ‘ಗುಣಮಟ್ಟದ ಬೋಧನೆ ಮೂಲಕ ಉತ್ತಮ ಫಲಿತಾಂಶ ನೀಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉಪನ್ಯಾಸಕರಿಗೆ ಸಲಹೆ ನೀಡಿದರು.
ಸಮೀಪದ ಹರಿಯಬ್ಬೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ₹ 1 ಕೋಟಿ ವೆಚ್ಚದ ನಾಲ್ಕು ನೂತನ ಕೊಠಡಿಗಳನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಚಿತ್ರದುರ್ಗ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಫಲಿತಾಂಶ ಹೆಚ್ಚಳವಾಗಬೇಕು. ಇದಕ್ಕೆ ಪೂರಕವಾಗಿ ಶಿಕ್ಷಕರು ಮತ್ತು ಉಪನ್ಯಾಸಕರು ಹೆಚ್ಚಿನ ಆಸಕ್ತಿ ತೆಗೆದುಕೊಳ್ಳಬೇಕು. ಜೊತೆಗೆ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರ ಸರಿದು ಮುಂಬರುವ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡು ಜಿಲ್ಲೆಯ ಫಲಿತಾಂಶ ರಾಜ್ಯಕ್ಕೆ ಪ್ರಥಮವಾಗುವಂತೆ ಮಾಡಬೇಕು’ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್.ಆರ್.ತಿಪ್ಪೇಸ್ವಾಮಿ, ಕೆಡಿಪಿ ಸದಸ್ಯ ತಿಮ್ಮಯ್ಯ, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಘಟಕದ ಅಧ್ಯಕ್ಷ ಈರಲಿಂಗೇಗೌಡ, ಹರಿಯಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಓಂಕಾರಪ್ಪ, ರಾಜಣ್ಣ, ಬಜ್ಜೇರ ಗೋವಿಂದರಾಜು, ಚಂದ್ರಕಾಂತ್, ಲೋಕಣ್ಣ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹನುಮಂತಪ್ಪ, ಸಹಾಯಕ ಎಂಜಿನಿಯರ್ ನಾಗರಾಜು, ಪವನ್, ಬೋಜರಾಜು, ಚಿದಾನಂದ, ಹೇಮಂತ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.