ADVERTISEMENT

ತನಿಖಾಧಿಕಾರಿ ಎದುರು ಹಾಜರಾಗುವೆ: ರಘು ಆಚಾರ್‌

ವಿಧಾನಪರಿಷತ್‌ ಸದಸ್ಯ ರಘು ಆಚಾರ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2018, 19:27 IST
Last Updated 21 ನವೆಂಬರ್ 2018, 19:27 IST
ರಘು ಆಚಾರ್
ರಘು ಆಚಾರ್   

ಚಿತ್ರದುರ್ಗ: ತಪ್ಪು ವಿಳಾಸ ನೀಡಿ ಮತದಾನದ ಹಕ್ಕನ್ನು ಬದಲಿಸಿಕೊಂಡ ಹಾಗೂ ನಕಲಿ ಬಿಲ್‌ ಸಲ್ಲಿಸಿ ಹೆಚ್ಚುವರಿ ಭತ್ಯೆ ಪಡೆದ ಆರೋಪ ಎದುರಿಸುತ್ತಿರುವ ವಿಧಾನಪರಿಷತ್‌ ಸದಸ್ಯ ರಘು ಆಚಾರ್‌, ತನಿಖಾಧಿಕಾರಿ ಎದುರು ಗುರುವಾರ ಹಾಜರಾಗಲಿದ್ದಾರೆ.

‘ನಾನು ಯಾವುದೇ ತಪ್ಪು ಮಾಡಿಲ್ಲ. ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದ್ದರಿಂದ ಬೇಸರವಾಗಿದೆ. ಬಂಧನದ ಭೀತಿ ಇಲ್ಲವಾದ್ದರಿಂದ ನಿರೀಕ್ಷಣಾ ಜಾಮೀನು ಪಡೆಯುವುದಿಲ್ಲ’ ಎಂದು ರಘು ಆಚಾರ್‌ ತಿಳಿಸಿದ್ದಾರೆ.

‘ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್‌ ಬಂದಿಲ್ಲ. ಸರ್ಕಾರಕ್ಕೆ ವಂಚನೆ ಮಾಡಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಡುವ ಅಗತ್ಯವಿದೆ. ವಿಧಾನಸೌಧ ಠಾಣೆಗೆ ಹಾಜರಾಗಿ ತನಿಖೆಗೆ ಸಹಕರಿಸುತ್ತೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.