ಚಳ್ಳಕೆರೆ ನಗರದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಶಾಸಕ ಟಿ ರಘುಮೂರ್ತಿ ಅವರು,ವಚನಕಾರ ಸಿದ್ದರಾಮ ಅವರ ಭಾವಚಿತ್ರಕ್ಕೆ
ಚಳ್ಳಕೆರೆ: ಹನ್ನೆರಡನೇ ಶತಮಾನದ ಪ್ರಮುಖ ವಚನಕಾರ ಕರ್ಮಯೋಗಿ ಸಿದ್ದರಾಮರು ಕೈಗೊಂಡಿದ್ದ ಸಾಮಾಜಿಕ ಕಾರ್ಯಗಳು ಇಂದಿಗೂ ಮಾದರಿಯಾಗಿವೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಭೋವಿ ಸಮಾಜದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಿದ್ದರಾಮ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಸಮಾಜದ ಅಂತ್ಯಂತ ಹಿಂದುಳಿದ ಸಮುದಾಯದಲ್ಲಿ ಬೆಳೆದ ಸಿದ್ದರಾಮ, ಮನುಷ್ಯ, ಪ್ರಾಣಿ ಮತ್ತು ಪಕ್ಷಿಗಳಿಗೆ ನೀರಿನ ದಾಹ ನೀಗಿಸುವ ಸಲುವಾಗಿ ಕೆರೆ, ಕಟ್ಟೆ ನಿರ್ಮಿಸಿ ಬಾವಿ ತೋಡಿಸುವ ಮೂಲಕ ಜಲ ಸಂರಕ್ಷಣೆಗೆ ನಾಂದಿ ಹಾಡಿದ್ದಾರೆ. ಅವರ ವಚನಗಳಲ್ಲಿನ ನೈತಿಕ ಹಾಗೂ ಮಾನವೀಯ ಮೌಲ್ಯಗಳನ್ನು ಸಮಾಜಕ್ಕೆ ಪರಿಚಯಿಸುವ ಕೆಲಸವಾಗಬೇಕು’ ಎಂದು ಹೇಳಿದರು.
‘ಕರ್ಮಯೋಗಿ ಸಿದ್ದರಾಮರ ಕಾಯಕ ನಿಷ್ಠೆ, ಸಾಮಾಜಿಕ ಬದುಕು, ಭಕ್ತಿ, ಶ್ರದ್ಧೆ, ಮೌಲ್ಯ ಯುವಜನತೆಗೆ ಮಾದರಿ. ಹಾಗಾಗಿ ಹನ್ನೆರಡನೇ ಶತಮಾನದ ಎಲ್ಲ ವಚನಕಾರರ ವಚನಗಳ ಸಾರವನ್ನು ಮಕ್ಕಳಿಗೆ ತಪ್ಪದೇ ಮನನ ಮಾಡಿಸಬೇಕು’ ಎಂದು ತಹಶೀಲ್ದಾರ್ ರೇಹಾನ್‍ಪಾಷ ಪೋಷಕರಲ್ಲಿ ಮನವಿ ಮಾಡಿದರು.
ಕೆಪಿಪಿಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನೇರಲಗುಂಟೆ ರಾಮಪ್ಪ, ಪರಶುರಾಂಪುರ ಹೋಬಳಿ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ.ಶಶಿಧರ, ಭೋವಿ ಸಮಾಜದ ಮುಖಂಡ ವೆಂಕಟಪ್ಪ, ಶಿಕ್ಷಕ ತಿಮ್ಮಣ್ಣ, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್.ಆಂಜನೇಯ ಮಾತನಾಡಿದರು.
ತಾಲ್ಲೂಕು ಕಚೇರಿಯಲ್ಲಿ ವಚನಕಾರ ಸಿದ್ದರಾಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಲಾಯಿತು. ನಗರಸಭೆ ಸದಸ್ಯ ರಮೇಶ್‍ಗೌಡ, ತಿಪ್ಪೇಸ್ವಾಮಿ, ರಾಮಣ್ಣ, ಶ್ರೀನಿವಾಸ್, ನಗರಸಭೆ ಪೌರಾಯುಕ್ತ ಸಿ.ಚಂದ್ರಪ್ಪ, ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕ ವಿರೂಪಾಕ್ಷಪ್ಪ, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೇವಣ್ಣ, ತಾಲ್ಲೂಕು ಕಚೇರಿ ಶ್ರೀನಿವಾಸ್, ಪ್ರಕಾಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.