ADVERTISEMENT

ಬರಪೀಡಿತ ಜಿಲ್ಲೆಯಲ್ಲಿ ಮುಂದುವರಿದ ಮಳೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2019, 12:49 IST
Last Updated 1 ಅಕ್ಟೋಬರ್ 2019, 12:49 IST
ಹೊಸದುರ್ಗ ತಾಲ್ಲೂಕಿನಲ್ಲಿ ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ವೇದಾವತಿ ನದಿಯ ಒಳಹರಿವು ಹೆಚ್ಚಳವಾಗಿರುವ ದೃಶ್ಯ
ಹೊಸದುರ್ಗ ತಾಲ್ಲೂಕಿನಲ್ಲಿ ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ವೇದಾವತಿ ನದಿಯ ಒಳಹರಿವು ಹೆಚ್ಚಳವಾಗಿರುವ ದೃಶ್ಯ   

ಚಿತ್ರದುರ್ಗ: ಬರಪೀಡಿತ ಜಿಲ್ಲೆಯ ವಿವಿಧೆಡೆ ಸೋಮವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಕೆಲ ಕೆರೆಗಳು, ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ.

ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ವೇದಾವತಿ ನದಿಯ ಒಳ ಹರಿವು ಹೆಚ್ಚಳವಾಗಿದ್ದು, ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೂ ನೀರು ಹರಿದು ಬಂದಿದೆ.

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ದಶಕದ ನಂತರ ದೊಡ್ಡಹಳ್ಳ ತುಂಬಿ ಹರಿಯುತ್ತಿದೆ. ಚಿತ್ರದುರ್ಗ ನಗರ ಹಾಗೂ ತಾಲ್ಲೂಕಿನ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಮಳೆಯ ರಭಸಕ್ಕೆ ಚಿಕ್ಕಜಾಜೂರು ಸಮೀಪದ ಶೃಂಗೇರಿ ಹನುಮನಹಳ್ಳಿ ಕೆರೆಗೆ ನೀರು ಹರಿದು ಬಂದಿದೆ. ಗುಂಜಿಗನೂರು ಹಳ್ಳದಿಂದ ನೀರು ಹೊರಗೆ ಹರಿಯುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.