ADVERTISEMENT

ನಿರಂತರ ಮಳೆ: ಹೊಸದುರ್ಗ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2022, 4:47 IST
Last Updated 18 ಜುಲೈ 2022, 4:47 IST
   

ಚಿತ್ರದುರ್ಗ: ಸೋಮವಾರ ನಸುಕಿನಿಂದ ಮಳೆ ಹೆಚ್ಚಾಗಿರುವ ಪರಿಣಾಮ ಹೊಸದುರ್ಗ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಎರಡು ವಾರಗಳಿಂದ ಸುರಿಯುತ್ತಿದ್ದ ತುಂತುರು ಮಳೆ ಸೋಮವಾರ ಬಿರುಸು ಪಡೆದಿದೆ. ಬೆಳಿಗ್ಗೆ 7 ಗಂಟೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕೆಲವಡೆ ಹಳ್ಳ, ಕೊಳ್ಳಗಳು ಭರ್ತಿಯಾಗಿವೆ.

ಹೊಸದುರ್ಗ ತಾಲ್ಲೂಕಿನಲ್ಲಿ ಮಾತ್ರ ಮಳೆ ಹೆಚ್ಚಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರವಿಶಂಕರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ADVERTISEMENT

ಜಿಲ್ಲೆಯಲ್ಲಿ ಸೋಮವಾರದಿಂದ ಮಳೆ ಚುರುಕಾಗಿದೆ. ಹೊಳಲ್ಕೆರೆ, ಚಿತ್ರದುರ್ಗ ತಾಲ್ಲೂಕಿನ ಹಲವೆಡೆ ಮಳೆಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.