ADVERTISEMENT

ರಾಜೀವ್ ಗಾಂಧಿ ಆದರ್ಶ ಮೈಗೂಡಿಸಿಕೊಳ್ಳಿ

ಕಾರ್ಯಕರ್ತರಿಗೆ ಶಾಸಕ ಟಿ. ರಘುಮೂರ್ತಿ ಸಲಹೆ

​ಪ್ರಜಾವಾಣಿ ವಾರ್ತೆ
Published 22 ಮೇ 2022, 2:34 IST
Last Updated 22 ಮೇ 2022, 2:34 IST
ಚಳ್ಳಕೆರೆ ಶಾಸಕರ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಶಾಸಕ ಟಿ. ರಘುಮೂರ್ತಿ, ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜನಪ್ಪ ಭಾಗವಹಿಸಿದ್ದರು.
ಚಳ್ಳಕೆರೆ ಶಾಸಕರ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಶಾಸಕ ಟಿ. ರಘುಮೂರ್ತಿ, ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜನಪ್ಪ ಭಾಗವಹಿಸಿದ್ದರು.   

ಚಳ್ಳಕೆರೆ: ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಮಾಜಿ ಪ್ರಧಾನಿರಾಜೀವ್ ಗಾಂಧಿ ಅವರ ಆದರ್ಶಗಳನ್ನುಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಟಿ. ರಘುಮೂರ್ತಿ ಕಾರ್ಯಕರ್ತರಿಗೆ ಸಲಹೆನೀಡಿದರು.

ತಾಲ್ಲೂಕು ಬ್ಲಾಕ್ ಕಾಂಗ್ರೆಸ್‌ನಿಂದ ಶಾಸಕರ ಭವನದಲ್ಲಿ ಶನಿವಾರ ಆಯೋಜಿಸಿದ್ದ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ದೀನ ದಲಿತ, ಹಿಂದುಳಿದ ಅಲ್ಪಸಂಖ್ಯಾತ ಸಮುದಾಯಗಳ ಏಳಿಗೆಗೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದರು. ದೂರ ದೃಷ್ಟಿತ್ವ ಹೊಂದಿದ್ದ ರಾಜೀವ ಗಾಂಧಿ ಅವರು, ಇವತ್ತಿನ ತಂತ್ರಜ್ಞಾನ, ಡಿಜಿಟಲ್ ಕ್ರಾಂತಿಗೆ ಅಂದೇ ಮುನ್ನುಡಿ ಬರೆದಿದ್ದರು ಎಂದರು.

ADVERTISEMENT

ಕಾಂಗ್ರೆಸ್ ಮುಖಂಡ ಎಚ್.ಎಸ್. ಸೈಯದ್, ಕೇವಲ ಕಾಂಗ್ರೆಸ್‍ಗೆ ಸೀಮಿತವಾಗಿರದೆ ರಾಜೀವ ಗಾಂಧಿಯವರು ಎಲ್ಲಾ ಜಾತಿ –ಧರ್ಮದ ವಿಶ್ವಾಸಗಳಿಸಿದ ದೇಶದ ಜ್ಯಾತ್ಯತೀತ ನಾಯಕರಾಗಿದ್ದರು ಎಂದು ಹೇಳಿದರು.

ವಿಶ್ವಕರ್ಮ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮಾತನಾಡಿದರು.

ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜನಪ್ಪ ಪುಷ್ಪ ನಮನ ಸಲ್ಲಿಸಿದರು.

ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಗಿರಿಯಪ್ಪ, ನಗರಸಭೆ ಉಪಾಧ್ಯಕ್ಷೆ ಮಂಜುಳಾ ಆರ್. ಪ್ರಸನ್ನಕುಮಾರ್, ಸದಸ್ಯ ಕೆ. ವೀರಭದ್ರಯ್ಯ, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಮೇಶ್‍ಗೌಡ, ಡಿ.ಕೆ.ಕಾಟಯ್ಯ, ಮುಜೀಬ್, ನಾಗರಾಜ, ಪಾಲಯ್ಯ, ನಾಗಭೂಷಣ, ರಾಮಾಂಜಿನಿ, ರೈಲ್ವೆಗೇಟ್ ಹನುಮಂತಪ್ಪ, ಮೀರಾಸಾಬಿಹಳ್ಳಿ ಶಾಂತಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.