ADVERTISEMENT

ಭಾರತಕ್ಕೆ ಆಧುನಿಕ ಸ್ಪರ್ಶ ನೀಡಿದ ರಾಜೀವ್ ಗಾಂಧಿ: ಎಂ.ಕೆ. ತಾಜ್‌ಪೀರ್‌ ಅನಿಸಿಕೆ

​ಪ್ರಜಾವಾಣಿ ವಾರ್ತೆ
Published 22 ಮೇ 2025, 15:11 IST
Last Updated 22 ಮೇ 2025, 15:11 IST
ಕಾಂಗ್ರೆಸ್‌ ಚಿತ್ರದುರ್ಗ ಜಿಲ್ಲಾ ಘಟಕದ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಭಾವಚಿತ್ರಕ್ಕೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್‌ ಬುಧವಾರ ಪುಷ್ಪನಮನ ಸಲ್ಲಿಸಿದರು
ಕಾಂಗ್ರೆಸ್‌ ಚಿತ್ರದುರ್ಗ ಜಿಲ್ಲಾ ಘಟಕದ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಭಾವಚಿತ್ರಕ್ಕೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್‌ ಬುಧವಾರ ಪುಷ್ಪನಮನ ಸಲ್ಲಿಸಿದರು   

ಚಿತ್ರದುರ್ಗ: ಭಯೋತ್ಪಾದನೆ ಅಶಾಂತಿ ಮತ್ತು ಅಸ್ಥಿರತೆಯ ಸಂಕೇತ. ಆದಕಾರಣ ರಾಜೀವ್‌ ಗಾಂಧಿ ಅವರು ನಿಧನರಾದ ದಿನವನ್ನು ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ ಎಂದು ಘೋಷಿಸಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್‌ ತಿಳಿಸಿದರು.

ನಗರದಲ್ಲಿರುವ ಕಾಂಗ್ರೆಸ್‌ ಜಿಲ್ಲಾ ಘಟಕದ ಕಚೇರಿಯಲ್ಲಿ ಬುಧವಾರ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು

‘ರಾಜೀವ್‌ ಅವರು ಸಂಪರ್ಕ ಕ್ರಾಂತಿಯ ಮೂಲಕ ಭಾರತಕ್ಕೆ ಆಧುನಿಕ ಸ್ಪರ್ಶ ನೀಡಿದರು. 18 ವರ್ಷಕ್ಕೆ ಮತದಾನದ ಹಕ್ಕು ಜಾರಿಗೊಳಿಸಿ, 73 ಮತ್ತು 74ನೇ ಸಂವಿಧಾನಾತ್ಮಕ ತಿದ್ದುಪಡಿಗೆ ಅಡಿಗಲ್ಲು ಹಾಕಿದರು’ ಎಂದು ತಿಳಿಸಿದರು.

ADVERTISEMENT

‘ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಉತ್ತಮ ಕಾರ್ಯ ಮಾಡುವ ಮೂಲಕ ದೇಶವನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ದರು. ಇಂದು ನಾವು ಬಳಸುವ ಕಂಪ್ಯೂಟರ್‌ ಸೇರಿದಂತೆ ಅನೇಕ ತಂತ್ರಜ್ಞಾನವನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ’ ಎಂದು ಸ್ಮರಿಸಿದರು.

ಕಾಂಗ್ರೆಸ್‌ ಪರಿಶಿಷ್ಟ ಪಂಗಡದ ಜಿಲ್ಲಾ ಘಟಕದ ಅಧ್ಯಕ್ಷ ಜಯಣ್ಣ, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ನಂದಿನಿ ಗೌಡ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮೈಲಾರಪ್ಪ, ಪರಿಶಿಷ್ಟ ಜಾತಿ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್‌, ಉಪಾಧ್ಯಕ್ಷ ರವಿಕುಮಾರ್‌, ಸೇವಾದಳದ ಜಿಲ್ಲಾ ಘಟಕದ ಅಧ್ಯಕ್ಷ ಭೀಮರಾಜ್‌, ಮುಖಂಡರಾದ ಸಾಧಿಕ್‌ವುಲ್ಲಾ, ಮುದಸಿರ್‌ ನವಾಜ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.