
ಪ್ರಜಾವಾಣಿ ವಾರ್ತೆಧರ್ಮಪುರ: ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಆರೋಪದಡಿ 23 ವರ್ಷದ ಯುವಕನನ್ನು ಅಬ್ಬಿನಹೊಳೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾನೆ.
‘ಬಾಲಕಿ 9ನೇ ತರಗತಿ ವಿದ್ಯಾರ್ಥಿನಿ. ಅದೇ ಗ್ರಾಮದಯುವಕ ಆರು ತಿಂಗಳುಗಳಿಂದ ಅತ್ಯಾಚಾರ ನಡೆಸಿದ್ದಾನೆ. ಇದರಿಂದಾಗಿ ಮಗಳು ಗರ್ಭಿಣಿಯಾಗಿದ್ದಾಳೆ’ಎಂದು ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
‘ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದುಸಬ್ ಇನ್‌ಸ್ಪೆಕ್ಟೆರ್ ಪರಶುರಾಮ್ಎಸ್.ಲಮಾಣಿ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.