ಅತ್ಯಾಚಾರ
ಸಾಂದರ್ಭಿಕ ಚಿತ್ರ
ಹಿರಿಯೂರು: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಸಂಬಂಧ ಯುವಕನೊಬ್ಬನ ವಿರುದ್ಧ ಗುರುವಾರ ನಗರ ಠಾಣೆಯಲ್ಲಿ ಪೋಕ್ಸೊ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
‘ಯುವಕ ದರ್ಶನ್ ಎಂಬಾತ ಪರಿಚಯಿಸಿಕೊಂಡು, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಗರ್ಭಿಣಿಯಾಗಿದ್ದು, ಮದುವೆ ಆಗುವಂತೆ ಯುವಕನನ್ನು ಒತ್ತಾಯಿಸಿದಾಗ, ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾನೆ’ ಎಂದು ಬಾಲಕಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.