
ಪ್ರಜಾವಾಣಿ ವಾರ್ತೆಚಳ್ಳಕೆರೆ: ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮನೀಡಿದ ಕಾರಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಸಿಬ್ಬಂದಿ ಬಾಲಕಿ ಜೊತೆ ಸಮಾಲೋಚನೆ ನಡೆಸಿದ್ದರು. ನಗರದ ಖಾಸಗಿ ಫೈನಾನ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿರುವುದಾಗಿ ಬಾಲಕಿ ತಿಳಿಸಿದ್ದಾಳೆ. ಇದರ ಆಧಾರದ ಮೇಲೆ ಆರೋಪಿ ವಿರುದ್ಧ ಶನಿವಾರ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮೇಲ್ವಿಚಾರಕಿ ತಿಪ್ಪಮ್ಮ, ಬಾಲಕಿಯನ್ನು ಚಿತ್ರದುರ್ಗದ ಸಖಿ ಕೇಂದ್ರಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.