ಧರ್ಮಪುರ: ಸಮೀಪದ ಅಂಬಲಗೆರೆ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
ಭಾನುವಾರ ಬೆಳಿಗ್ಗೆ ದೇವರಿಗೆ ಅಭಿಷೇಕ, ರಥಾಂಗಹೋಮದ ನಂತರ ತೇರಿನ ಮುಂಭಾಗದಲ್ಲಿ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನಡೆಸಲಾಯಿತು.
ರಥಕ್ಕೆ ಹೂವಿನ ಅಲಂಕಾರ, ಬಾಳೆ ದಿಂಡು ಮತ್ತು ಬಾವುಟಗಳಿಂದ ಅಲಂಕರಿಸಲಾಗಿತ್ತು. ನಂತರ ದೇವರ ಮೂರ್ತಿಯನ್ನು ದೇವಸ್ಥಾನದಿಂದ ರಥದ ಬಳಿ ತಂದು ಪೂಜೆ ಆದ ನಂತರ ರಥೋತ್ಸವದಲ್ಲಿ ಕೂರಿಸಲಾಯಿತು. ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ರಥಕ್ಕೆ ಭಕ್ತರು ಬಾಳೆಹಣ್ಣು, ಕಾಯಿ, ಸೂರು ಮೆಣಸು, ಸೂರು ಬೆಲ್ಲ ತೂರುವ ಮೂಲಕ ಭಕ್ತಿ ಸಮರ್ಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.