ADVERTISEMENT

ಚಳ್ಳಕೆರೆ: ಮಹಿಳೆಯರಿಗೆ ಅಶ್ಲೀಲ ಚಿತ್ರ ರವಾನೆ, ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2020, 15:16 IST
Last Updated 7 ನವೆಂಬರ್ 2020, 15:16 IST
   

ಚಳ್ಳಕೆರೆ: ಮಹಿಳೆಯರಿಗೆ ಮೊಬೈಲ್ ಮೂಲಕ ಅಶ್ಲೀಲ ಚಿತ್ರ ಮತ್ತು ಸಂದೇಶ ಕಳುಹಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಈಚೆಗೆ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತ್ಯಾಗರಾಜನಗರದ ರಾಮಕೃಷ್ಣ (55) ಬಂಧಿತ ಆರೋಪಿ.

ರಾಮಕೃಷ್ಣ ಮೊಬೈಲ್ ಮೂಲಕ ಮಹಿಳೆಯರಿಗೆ ಪ್ರತಿ ದಿನ ಅಶ್ಲೀಲ ಚಿತ್ರ ಮತ್ತು ಸಂದೇಶ ಕಳುಹಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ADVERTISEMENT

ಆರೋಪಿ 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಚಿತ್ರ ಮತ್ತು ಸಂದೇಶ ಕಳುಹಿಸಿರುವುದು ತಿಳಿದುಬಂದಿದೆ. ಪ್ರಕರಣ ದಾಖಲಾಗಿದೆ ಎಂದು ಪಿಎಸ್‍ಐ ಮಂಜುನಾಥ ಅರ್ಜುನ ಲಿಂಗಾರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.