ಚಿತ್ರದುರ್ಗ: ‘ಪುತ್ರ ಶೋಕ ನಿರಂತರ. ನನ್ನ ಮಗನ ಸಾವಿಗೆ ರಾಜ್ಯ ಸರ್ಕಾರ ನ್ಯಾಯ ಕೊಡಿಸಬೇಕು’ ಎಂದು ನಟ ದರ್ಶನ್ ಹಾಗೂ ಸಹಚರರಿಂದ ಹತ್ಯೆಯಾದ ರೇಣುಕಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡರ್ ಆಗ್ರಹಿಸಿದರು.
‘ಘಟನೆ ನಡೆದು ವರ್ಷವಾಗಿದೆ. ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಸರ್ಕಾರವು ನಮ್ಮ ಸೊಸೆ ಸಹನಾಗೆ ಮಾನವೀಯ ನೆಲೆಗಟ್ಟಿನಲ್ಲಿ ಸರ್ಕಾರಿ ನೌಕರಿ ನೀಡಬೇಕು’ ಎಂದು ಭಾನುವಾರ ಮಾಧ್ಯಮಗಳಿಗೆ ತಿಳಿಸಿದರು.
‘ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿದರು.
2024 ಜೂನ್ 8 ರಂದು ರೇಣುಕಾಸ್ವಾಮಿ ಶವ ಬೆಂಗಳೂರಿನಲ್ಲಿ ಪತ್ತೆಯಾಗಿತ್ತು. ಕೊಲೆ ಆರೋಪದ ಮೇಲೆ ನಟ ದರ್ಶನ್ ಅವರ ಬಂಧನವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.