ADVERTISEMENT

ಕ್ರೈಸ್ತ ಪಟ್ಟಿಯಿಂದ ಕೈಬಿಡಿ: ಸಿದ್ಧರಾಮೇಶ್ವರ ಸ್ವಾಮೀಜಿ ಆಗ್ರಹ

ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2025, 23:55 IST
Last Updated 21 ಸೆಪ್ಟೆಂಬರ್ 2025, 23:55 IST
ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ
ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ   

ಚಿತ್ರದುರ್ಗ: ‘ವಡ್ಡ ಕ್ರಿಶ್ಚಿಯನ್‌ ಹಾಗೂ ಪರಿಶಿಷ್ಟ ಜಾತಿಗಳನ್ನು ಕ್ರೈಸ್ತ ಪಟ್ಟಿಯಿಂದ ಕೈಬಿಡಬೇಕು. ಆಮಿಷದಿಂದ ಕ್ರೈಸ್ತ ಧರ್ಮಕ್ಕೆ ಮತಾಂತರವಾದವರು ಎಚ್ಚೆತ್ತುಕೊಂಡು ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸಬೇಕು’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದರು.

‘48 ಕ್ರೈಸ್ತ ಜಾತಿಗಳಲ್ಲಿ 33 ಜಾತಿಗಳನ್ನು ಕೈಬಿಡಲು ಹಿಂದುಳಿದ ವರ್ಗಗಳ ಆಯೋಗ ನಿರ್ಧರಿಸಿರುವ ಮಾಹಿತಿಯಿದೆ. ಆದರೆ ಅದನ್ನು ಅಧಿಕೃತವಾಗಿ ಸರ್ಕಾರ ಘೋಷಿಸಬೇಕು’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಕ್ರೈಸ್ತ ಎಂದು ಬರೆಸಿದರೆ ಭವಿಷ್ಯದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯಿಂದ ವಂಚಿತರಾಗುತ್ತೀರಿ. ಹೀಗಾಗಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಧರ್ಮದ ಕಾಲಂನಲ್ಲಿ-ಹಿಂದೂ, ಜಾತಿ ಕಾಲಂನಲ್ಲಿ ಭೋವಿ, ಉಪಜಾತಿ ಕಾಲಂನಲ್ಲಿ ವಡ್ಡರ ಎಂದು ಬರೆಯಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.