ಪ್ರಜಾವಾಣಿ ವಾರ್ತೆ
ಧರ್ಮಪುರ: ಸಮೀಪದ ದೇವರಕೊಟ್ಟ ಮೊರಾರ್ಜಿ ವಸತಿ ಶಾಲೆಗಳ ಸಂಕೀರ್ಣದಲ್ಲಿ ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಸಿಬ್ಬಂದಿ ಶುಕ್ರವಾರ ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಶಿಕ್ಷಕ ಎ.ಹೇಮಣ್ಣ ಮಾತನಾಡಿ, ‘ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆಗಳ ಶಿಕ್ಷಕರಿಗೆ ಸಿಗುವ ಸೌಲಭ್ಯಗಳು ವಸತಿ ಶಾಲಾ ನೌಕರರು ಸಿಗುತ್ತಿಲ್ಲ. 13 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರೂ, ಕಡಿಮೆ ವೇತನ ಇದೆ. ಶಾಲಾ ವಸತಿ ಗೃಹದಲ್ಲಿಯೇ ವಾಸವಿದ್ದು, 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ತೆಗೆದುಕೊಳ್ಳಲಾಗುತ್ತಿದೆ. ಸಂಜೆ ವಿಶೇಷ ತರಗತಿ ತೆಗೆದುಕೊಳ್ಳುವ ವ್ಯವಸ್ಥೆಯೂ ಇದೆ. ಆದರೆ, ಜ್ಯೋತಿ ಸಂಜೀವಿನಿಯಾಗಲಿ, ಹೆಚ್ಚುವರಿ ಭತ್ಯೆಯಾಗಲಿ ಇಲ್ಲದಿರುವುದು ಶೋಚನೀಯ’ ಎಂದರು.
ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ನೀಲಕಂಠಯ್ಯ, ಏಕಾಂತರಾಜ್, ತಿಪ್ಪೇಸ್ವಾಮಿ, ಸುನೀಲ್ ಕುಮಾರ್, ಅರುಣಾಕ್ಷಿ, ವಿಜಯ್ ಕುಮಾರ್, ಪರಶುರಾಮ್, ನಿಜಾಮುದ್ದೀನ್, ಉಷಾ, ದ್ರಾಕ್ಷಾಯಿಣಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.