ನಾಯಕನಹಟ್ಟಿ: ‘ಹೋಬಳಿಯ ಜಂಬಯ್ಯನಹಟ್ಟಿಯಿಂದ ತಿಮ್ಮಪ್ಪಯ್ಯನಹಳ್ಳಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿಗೆ ₹ 3 ಕೋಟಿ ಅನುದಾನ ಒದಗಿಸಲಾಗಿದೆ’ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.
ತಿಮ್ಮಪ್ಪಯ್ಯನಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಗ್ರಾಮದ ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕವನ್ನು ಕಲ್ಪಿಸುತ್ತದೆ. ಕಳೆದ ವರ್ಷ ಸುರಿದ ಭಾರಿ ಮಳೆಗೆ ಹಲವು ಕೆರೆಗಳು ತುಂಬಿ ಕೋಡಿಯಲ್ಲಿ ನೀರು ಹರಿದ ಪರಿಣಾಮ ಗಜ್ಜುಗಾನಹಳ್ಳಿ, ರಾಮಸಾಗರ, ತಿಮ್ಮಪ್ಪಯ್ಯನಹಳ್ಳಿ, ಜಂಬಯ್ಯನಹಟ್ಟಿ ಗ್ರಾಮಗಳ ಬಳಿ ಸೇತುವೆ ಮೇಲೆ ನೀರು ಹರಿದಿತ್ತು’ ಎಂದರು.
ಮಳೆ ಬಂದರೆ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಹಿನ್ನಡೆಯಾಗುತ್ತದೆ. ಆದಷ್ಟು ಬೇಗ ಕಾಮಗಾರಿ ಆರಂಭಿಸಿ ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಹಕೀಂ ಅಹಮ್ಮದ್ ಅವರಿಗೆ ಸೂಚಿಸಿದರು.
ತಿಮ್ಮಪ್ಪಯ್ಯನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಟಿ.ಎನ್.ಶೈಲಾ, ಉಪಾಧ್ಯಕ್ಷ ಸೋಮಶೇಖರ್, ಸದಸ್ಯರಾದ ರೇವಣ್ಣ, ವಿಜಯಕುಮಾರ್, ಅಶೋಕ, ಶಾಂತಮ್ಮ, ಮುಖಂಡರಾದ ಬಾಲರಾಜ್, ಬಂಡೆಕಪಿಲೆ ಓಬಣ್ಣ, ತಿಪ್ಪೇಸ್ವಾಮಿ, ಪ್ರಕಾಶ್, ಕಾಟಯ್ಯ, ಪೊಲೀಸ್ ವೃತ್ತನಿರೀಕ್ಷಕ ಹನುಮಂತಪ್ಪ ಶಿರೆಹಳ್ಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.